ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, 17 ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನೈರುತ್ಯ ಮುಂಗಾರು ಜೂನ್ 3ರಂದು ಕೇರಳ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5ರ ನಂತರ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(India Meteorological Department) ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಕಡಿಮೆಯಾಗುತ್ತಿಲ್ಲ ಕರೋನಾ ಸಾವಿನ ಸಂಖ್ಯೆ..!
ಜೂನ್ 4ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ ಅದಕ್ಕಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್(Yellow Alert) ಕೂಡ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : K Sudhakar : 'ಕಣ್ಣಿಗೆ ಬ್ಲಾಕ್ ಫಂಗಸ್ ಬಂದ್ರೆ ಕಣ್ಣು ತೆಗೆಯಲೇ ಬೇಕಾಗುತ್ತದೆ'
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜೂನ್ 3 ಮತ್ತು 6ರವರೆಗೆ ವ್ಯಾಪಕ ಮಳೆ(Heavy Rainfall)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ : Siddaramaiah : ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಅಸ್ವಸ್ಥ!
ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಮಳೆ(Heavy Rain)ಯಾಗುವುದರಿಂದ ಒಟ್ಟು 17 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂನ್ 6ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.
ಇದನ್ನೂ ಓದಿ : Covid Relief Package : ರಾಜ್ಯದ ಖಾಸಗಿ ಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್!
ಇಂದು ನೈಋತ್ಯ ಮುಂಗಾರು(Monsoon) ಕೇರಳವನ್ನು ಪ್ರವೇಶಿಸಲಿದೆ. ಹೀಗಾಗಿ, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕಕ್ಕೆ ಜೂನ್ 6 ಅಥವಾ 7ರಂದು ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ