ಕ್ರೂಸರ್-ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು
ಚಿತ್ರದುರ್ಗದಲ್ಲಿ ಶನಿವಾರ ನಡೆದ ಗಣೇಶೋತ್ಸವದ ಶೋಭಾಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಹೊಸದುರ್ಗ: ಕ್ರೂಸರ್ ಮತ್ತು ಕಾರಿನ ನಡುವೆ ಭಾನುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ದೊಸದುರ್ಗ ತಾಲೂಕಿನ ಕಲ್ಕರೆ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗದಲ್ಲಿ ಶನಿವಾರ ನಡೆದ ಗಣೇಶೋತ್ಸವದ ಶೋಭಾಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಹೊಸದುರ್ಗದಿಂದ ಬರುತ್ತಿದ್ದ ಕಾರಿನಲ್ಲಿದ್ದ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್ ಮತ್ತು ಕ್ರೂಸರ್ ನಲ್ಲಿದ್ದ ಅರಸೀಕೆರೆ ಮೂಲದ ಲೋಕೇಶ್ ಮೃತಪಟ್ಟ ದುರ್ದೈವಿಗಳು.
ಉಳಿದಂತೆ ಅಪಘಾತದಲ್ಲಿ ಗಾಯಗೊಂಡ 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೊಸದುರ್ಗ ಪೊಲೀಸರು ತಿಳಿಸಿದ್ದಾರೆ.