ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ನಾಲ್ವರ ದುರ್ಮರಣ

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದ ಸೌಪರ್ಣಿಕಾ ಅಪಾರ್ಟ್ಮೆಂಟ್ ಬಳಿ ಕೂಲಿ ಕಾರ್ಮಿಕರು ತಂಗಲು ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಕುಸಿದ ಪರಿಣಾಮ ನಾಲ್ವರು ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. 

Written by - Yashaswini V | Last Updated : Jul 21, 2022, 09:56 AM IST
  • ಶೆಡ್ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ
  • ಈ ಘಟನೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿಯಲ್ಲಿ ನಡೆದಿದೆ
  • ಮೃತ ಕೂಲಿ ಕಾರ್ಮಿಕರನ್ನು ಉತ್ತರ ಭಾರತ ಮೂಲದವರು ಎಂದು ಗುರುತಿಸಲಾಗಿದೆ.
ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ನಾಲ್ವರ ದುರ್ಮರಣ title=
Four laborers died after the shed collapsed in bengaluru

ಬೆಂಗಳೂರು:  ಶೆಡ್ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಇನ್ನೂ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮೃತ ಕೂಲಿ ಕಾರ್ಮಿಕರನ್ನು ಉತ್ತರ ಭಾರತ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವೈಟ್ ಪೀಲ್ಡ್ ನ ವೈದೇಹಿ ಅಸ್ವತ್ರೆಗೆ ದಾಖಲು ಮಾಡಲಾಗಿದೆ. 

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ಕೈಗಾರಿಕಾ ಪ್ರದೇಶದ ಸೌಪರ್ಣಿಕಾ ಅಪಾರ್ಟ್ಮೆಂಟ್ ಬಳಿ ಕೂಲಿ ಕಾರ್ಮಿಕರು ತಂಗಲು ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಕುಸಿದ ಪರಿಣಾಮ ನಾಲ್ವರು ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ಘಟನೆಯಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿ- Food Poisoning: ಹುಟ್ಟುಹಬ್ಬದ ಹಳಸಿದ ಬಿರಿಯಾನಿ ಸೇವಿಸಿ 24 ಜನ ಅಸ್ವಸ್ಥ

ಭಾರೀ ಮಳೆಯಿಂದಾಗಿ ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕೂಲಿ ಕಾರ್ಮಿಕರಿಗಾಗಿ ನಿರ್ಮಿಸಿದ್ದ ಶೆಡ್ ಮೇಲೆ ಪಕ್ಕದ ಹುಡಾನ್ ಕಂಪನಿಯ ವೇರ್ ಹೌಸ್ ನ ಗೊಡೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. 

ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಮನೋಜ್ ಕುಮಾರ್ ಸದಯ್ 35 ವರ್ಷ, ರಾಮ್ ಕುಮಾರ್ ಸದಯ್ 25, ನಿತೀಶ್ ಕುಮಾರ್ ಸದೆಯ 22, ಮಣಿತನ್ 28 ವರ್ಷ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸುನಿಲ್ ಮಂಡಲ್, ಶಂಭು ಮಂಡಲ,  ದಿಲೀಪ್, ದುರ್ಗೇಶ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ- Bangalore: ಡೆತ್‌ ನೋಟ್‌ ಬರೆದಿಟ್ಟು ಪ್ರೊಫೆಸರ್ ಆತ್ಮಹತ್ಯೆ

ಸ್ಥಳಕ್ಕೆ ಹೊಸಕೋಟೆ ಡಿವೈಎಸ್ಪಿ ಉಮಾಶಂಕರ್,  ತಿರುಮಲಶೆಟ್ಟಿಹಳ್ಳಿ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News