ಹಾಸನ: ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಕಟ್ಟಡದ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. 


COMMERCIAL BREAK
SCROLL TO CONTINUE READING

ಬೆಂಗಳೂರಿನ ಸ್ಪೈಕರ್ ಕಂಪೆನಿಯ ಉದ್ಯೋಗಿ ವಿವೇಕ್‍ನಾಯಕ್ ಇಂದು ಬೆಳಿಗ್ಗೆ ಕುಟುಂಬದವರನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಬೆಂಗಳೂರು ಹೆದ್ದಾರಿಯ ಖಾಸಗಿ ಹೋಟೆಲ್ ಬಳಿ ಇವರಿದ್ದ ಕಾರು ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಲಭ್ ಶೌಚಾಲಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಹೊತ್ತಿಕೊಂಡು ವಿವೇಕ್, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಸಲಾಗಿದೆ.  ಅತಿವೇಗವೇ ಅಪಘಾತಕ್ಕೆ ಕಾರಣವಿರದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.