`ಪಿಯು ಪರೀಕ್ಷಾ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ`
ಪರೀಕ್ಷೆ ಮಾಡೆಲ್ ಪೇಪರ್ ಥರ ಇರುತ್ತದೆ. ಒಟ್ಟು 81 ಮೌಲ್ಯಮಾಪನ ಕೇಂದ್ರ ಇರಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಇರಲಿವೆ. ಜೊತೆಗೆ ಮೊಬೈಲ್ ನಿಷೇಧ ಮಾಡಲಾಗಿದೆ.
ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೂ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಬರುವಾಗ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಬಹುದು. ಆದರೆ ಹಿಜಾಬ್ ಧರಿಸಿ ಪರೀಕ್ಷೆ ಕೇಂದ್ರಕ್ಕೆ ಬಂದರೆ ಪ್ರವೇಶ ನಿಷೇಧ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಇದನ್ನು ಓದಿ: "ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ"
ವಿಧಾನಸೌಧದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಮಾದ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, 2 ವರ್ಷಗಳ ನಂತರ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಪರೀಕ್ಷೆ ಮಾಡೆಲ್ ಪೇಪರ್ ಥರ ಇರುತ್ತದೆ. ಒಟ್ಟು 81 ಮೌಲ್ಯಮಾಪನ ಕೇಂದ್ರ ಇರಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಇರಲಿವೆ. ಜೊತೆಗೆ ಮೊಬೈಲ್ ನಿಷೇಧ ಮಾಡಲಾಗಿದೆ. ಎಸ್ಒಪಿ ಈಗಿನದೇ ಅನ್ವಯವಾಗಲಿದೆ. ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಇರಲಿದೆ. ಹಳ್ಳಿಯಿಂದ ಬರುವ ಮಕ್ಕಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯೂ ಇರಲಿದ್ದು, ಹೊಸದಾಗಿ ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕೇಂದ್ರ ತೆರೆಯಲಾಗಿದೆ ಎಂದರು.
ಇದನ್ನು ಓದಿ: ಮದರಸದಲ್ಲಿ ಶಿಕ್ಷಣ ಇಲಾಖೆಯ ಪಠ್ಯ ಬೇಡಿಕೆ.. ಆಧಾರವಿಲ್ಲದ ಟಿಪ್ಪು ಸಂಗತಿಗಳಿಗೆ ಕೊಕ್!
ಇನ್ನು ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಾವಣಿ ಮಾಡಿಕೊಂಡಿದ್ದಾರೆ.
ಬಾಲಕರು: 3,46,936
ಬಾಲಕಿಯರು: 3,37,319
ರೆಗ್ಯುಲರ್ ವಿದ್ಯಾರ್ಥಿಗಳು: 6,00,519
ಪುನರಾವರ್ತಿತ ವಿದ್ಯಾರ್ಥಿಗಳು: 61,808
ಖಾಸಗಿ ವಿದ್ಯಾರ್ಥಿಗಳು: 21,928
ವಿಷಯವಾರು ವಿದ್ಯಾರ್ಥಿಗಳ ಸಂಖ್ಯೆ:
ಕಲಾ ವಿಭಾಗ: 2,28,167
ವಾಣಿಜ್ಯ ವಿಭಾಗ: 2,45,519
ವಿಜ್ಞಾನ ವಿಭಾಗ: 2,10,569
ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ: 1076
ಅತಿ ಹೆಚ್ಚು ಪರೀಕ್ಷಾ ಕೇಂದ್ರಗಳ ಜಿಲ್ಲೆ
ಬೆಂಗಳೂರು ದಕ್ಷಿಣ: 83
ಅತಿ ಕಡಿಮೆ ಪರೀಕ್ಷೆ ಕೇಂದ್ರ:
ರಾಮನಗರ: 13
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.