ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ `ಶಕ್ತಿ`ಗೆ ಚಾಲನೆ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ- ಶಕ್ತಿ ಯೋಜನೆ: ಮೂಲ ದಾಖಲೆ ತೋರಿಸಿ ಉಚಿತ ಬಸ್ ಪ್ರಯಾಣ ಮಾಡಿ
ಇದೇ ಸಂದರ್ಭದಲ್ಲಿ ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಸೂಚನೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ - Rain Alert: ಮುಂದಿನ 2 ದಿನಗಳ ಕಾಲ ರಾಜ್ಯದ ಈ ಭಾಗದಲ್ಲಿ ಭಾರೀ ಮಳೆ! ಗುಡುಗು, ಮಿಂಚು ಸಹಿತ ಬಿರುಗಾಳಿಯ ಮುನ್ನೆಚ್ಚರಿಕೆ
"ಶಕ್ತಿ ಯೋಜನೆ"ಗೆ ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಚಾಲನೆ ನೀಡುತ್ತಾರೆ. ಇದೇ ಸಂದರ್ಭದಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ