Free Electricity : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ - ಪಂಗಡದ ಜನತೆಗೆ ಸಿಹಿ ಸುದ್ದಿ!
ಮೇ 13 ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 979 ಕೋಟಿ ರೂ. ಹೊರೆಯಾಗಲಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ 75 ಯುನಿಟ್ ವರೆಗೆ ನೀಡುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶ ಕ್ಕೂ ವಿಸ್ತರಿಸಲಾಗಿದೆ.
ಮೇ 13 ರಂದು ಸರ್ಕಾರ ಹೊರಡಿಸಿದ ಆದೇಶದಲ್ಲಿ ಗ್ರಾಮೀಣ ಭಾಗದ ಬಡವರಿಗೆ ಮಾತ್ರ ಯೋಜನೆ ಸೌಲಭ್ಯ ಇತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಹೊಸ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 979 ಕೋಟಿ ರೂ. ಹೊರೆಯಾಗಲಿದೆ.
ಇದನ್ನೂ ಓದಿ :ಕುಂಬಾರ ಸಮುದಾಯಕ್ಕೆ ಪರಿಷತ್ ಸ್ಥಾನಕ್ಕೆ ಒತ್ತಾಯ
ಪ್ರಸ್ತುತ, ಬಿಪಿಎಲ್ ವರ್ಗಕ್ಕೆ ಸೇರಿದ ಎಸ್‌ಸಿ/ಎಸ್‌ಟಿ ಕುಟುಂಬಗಳು 2017 ರಿಂದ ಜಾರಿಯಲ್ಲಿರುವ ಭಾಗ್ಯಜ್ಯೋತಿ ಅಥವಾ ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 40 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.
1.46 ಕೋಟಿ ಕುಟುಂಬಗಳು ಪ್ರತಿ ತಿಂಗಳು 75 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುತ್ತಿವೆ. ಅವುಗಳಲ್ಲಿ, ಭಾಗ್ಯಜ್ಯೋತಿ ಅಥವಾ ಕುಟೀರ ಜ್ಯೋತಿ ಯೋಜನೆಯಡಿ ಬರುವ 39.26 ಲಕ್ಷ ಎಸ್‌ಸಿ/ಎಸ್‌ಟಿ ಕುಟುಂಬಗಳು ವಾರ್ಷಿಕವಾಗಿ 1,35,692 ಮಿಲಿಯನ್ ಯೂನಿಟ್‌ಗಳನ್ನು ಬಳಸುತ್ತವೆ.
ಈ ಹೊಸ ಆದೇಶದಿಂದ ಎಸ್‌ಸಿ ಸಮುದಾಯವರು 694.15 ಕೋಟಿ ರೂ. ಮತ್ತು ಎಸ್‌ಟಿ ಸಮುದಾಯವರು 285.42 ಕೋಟಿ ರೂ. ಹಣ ವೆಚ್ಚವಾಗಲಿದೆ.
ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ 40 ಯೂನಿಟ್‌ಗಳಿಂದ 75 ಯೂನಿಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜಿನ ಪ್ರಮಾಣವನ್ನು ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಬಾರಿ ಮಾಡಿದ ಘೋಷಣೆಯನ್ನು ಇಂಧನ ಇಲಾಖೆಯ ಆದೇಶ ಉಲ್ಲೇಖಿಸಿದ್ದರೆ. ಮೊದಲಿಗೆ ಏಪ್ರಿಲ್ 5 ರಂದು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 115 ನೇ ಜನ್ಮದಿನದ ಸಂದರ್ಭದಲ್ಲಿ ಮತ್ತು ನಂತರ ಡಾ ಬಿಆರ್ ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14 ರಂದು ಸಿಎಂ ಬೊಮ್ಮಾಯಿ ಹೇಳಿದರು.
ಆದೇಶದ ಪ್ರಕಾರ, ಪ್ರತಿ ಫಲಾನುಭವಿ ಮನೆಗೆ ಮೀಟರ್ ಕಡ್ಡಾಯವಾಗಿದೆ. ಅಲ್ಲದೆ, ಫಲಾನುಭವಿಗಳು ತಮ್ಮ ಬಿಪಿಎಲ್ ಮತ್ತು ಆಧಾರ್ ಕಾರ್ಡ್‌ಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ :ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಸಿಎಂ ಬೊಮ್ಮಾಯಿ ಖುಷ್..!
"ಅರ್ಹ ಗ್ರಾಹಕರು ಮಾಸಿಕ ಬಿಲ್ ಅನ್ನು ತ್ವರಿತವಾಗಿ ಪಾವತಿಸಬೇಕು, ನಂತರ ಸರ್ಕಾರವು ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಸಬ್ಸಿಡಿ ರೂಪದಲ್ಲಿ ಹಣವನ್ನು ಮರುಪಾವತಿ ಮಾಡುತ್ತದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಎಸ್‌ಸಿ/ಎಸ್‌ಟಿಗಳನ್ನು ಓಲೈಸಲು ಕೈಗೊಂಡಿರುವ ಕ್ರಮಗಳ ದೀರ್ಘ ಪಟ್ಟಯ ಒಂದು ಕಾರ್ಯವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.