ಬೆಂಗಳೂರು: ಮಹಾಲಕ್ಷ್ಮೀಪುರಂ ವಾರ್ಡ್ ನ ಬಯಲು ರಂಗಮಂದಿರದಲ್ಲಿ ಸ್ಪೂರ್ತಿ ಯುವಕರ ವೇದಿಕೆ ವತಿಯಿಂದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಮುಖಂಡರಾದ ಡಾ.ವಿ.ನಾರಾಯಣಸ್ವಾಮಿ, ಮಾಜಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಸ್.ಕೇಶವಮೂರ್ತಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡ ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪರಿಸರ ರಾಮಕೃಷ್ಣ, ಸುಧೀಂದ್ರ, ನಟರಾಜ್ ರವರು ಉಪಸ್ಥಿತರಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Shivamogga: ನಿಷೇಧಿತ PFI ಅಂಗಸಂಸ್ಥೆ CFI ಸಂಘಟನೆ ಸೇರುವಂತೆ ಗೋಡೆ ಬರಹ ಪತ್ತೆ


ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ಡಾ. ವಿ.ನಾರಾಯಣಸ್ವಾಮಿ ಮಾತನಾಡಿ, ಸಮಾಜದಲ್ಲಿ ವೈದ್ಯರಿಗೆ ಉತ್ತಮ ಗೌರವ ಸ್ಥಾನಮಾನವಿದೆ. ವೈದ್ಯರನ್ನ ದೇವರಂತೆ ಜನರು ಕಾಣುತ್ತಾರೆ. ರೋಗಿಗಳಿಗೆ ಸಕಾಲದಲ್ಲಿ ಸಮರ್ಪಕ ರೀತಿಯಲ್ಲಿ ತಪಾಸಣೆ ಮತ್ತು ಆರೈಕೆ ಮಾಡಿದರೆ ಉತ್ತಮ ಜೀವನ ಸಾಗಿಸಬಹುದು ಎಂದರು.‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ  ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮನೆ, ಮನೆಗೆ ಆರೋಗ್ಯ ಯೋಜನೆ ಹಮ್ಮಿಕೊಂಡು 40 ಸಾವಿರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಇನ್ಯೂರೆನ್ಸ್ ಮಾಡಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.


ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಆರೋಗ್ಯ ಕಡೆ ಗಮನಹರಿಸಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಿಗೆ ಶೇಕಡ 50ರಷ್ಟು ರಿಯಾಯಿತಿ ದರ ನೀಡಿ ಹೈಟೆಕ್ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.


ಎಂ.ಶಿವರಾಜು ಮಾತನಾಡಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ವಾರ್ಡ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ ಹಮ್ಮಿಕೊಂಡು ಬರಲಾಗುತ್ತಿದೆ. ಬಡವರ ಸೇವೆ ದೇವರ ಸೇವೆ ಎಂದು ಎಲ್ಲರೂ ಮಾಡಿದಾಗ ಅಭಿವೃದ್ದಿಯಾಗಲು ಸಾಧ್ಯ ಎಂದರು.


ಇದನ್ನೂ ಓದಿ: BJP Rowdy Morcha Website: ಚುನಾವಣೆ ಸಮೀಪಿಸುತ್ತಿದ್ದಂತೆ 'ಬಿಜೆಪಿ ರೌಡಿ ಮೋರ್ಚಾ' ವೆಬ್ ಸೈಟ್ ಓಪನ್...!?


ಕೆಪಿಸಿಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ನಮ್ಮ ವಾರ್ಡ್ ನ ಬಡವರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸಿಗಬೇಕು ಎಂದು ವಾರ್ಡ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಸತತವಾಗಿ ಆಯೋಜಿಸುತ್ತಾ ಬರುತ್ತಿದ್ದೇವೆ. ಬಡವರಿಗೆ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಹಾರ, ಆರೋಗ್ಯ, ಆಶ್ರಯದ ಭದ್ರತೆ ನೀಡಿರುವುದು ಕಾಂಗ್ರೆಸ್ ಪಕ್ಷ. ಈ ‌ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.