ಧಾರವಾಡ : ಕಾರ್ಮಿಕರೊಂದಿಗೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡು ಅವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲು ಕಾರ್ಮಿಕ ಇಲಾಖೆ ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿವಿಧ ರೀತಿಯ ವಾಹನಗಳನ್ನು ಚಲಾಯಿಸುವ ಡ್ರೈವರ್, ಕ್ಲೀನರ್‍ಗಳ ಹಿತಾಸಕ್ತಿ ಹಾಗೂ ಅವರ ಮಕ್ಕಳ, ಕುಟುಂಬದ ರಕ್ಷಣೆಗಾಗಿ ರಾಜ್ಯದಲ್ಲಿ ಶೀಘ್ರವಾಗಿ ಡ್ರೈವರ್ ಬೋರ್ಡ್ ಸ್ಥಾಪಿಸಲಾಗುವುದು ಎಂದು ಕಾರ್ಮಿಕ ಸಚಿವರಾದ ಅರಬೈಲ್ ಶಿವರಾಂ ಹೆಬ್ಬಾರ (Shivaram Hebbar) ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: SR Hiremath : ಗೋವು ರಕ್ಷಕರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಎಸ್.ಆರ್. ಹಿರೇಮಠ!


ಇತ್ತಿಚಿಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕ ಮಕ್ಕಳಿಗೆ ಉಚಿತವಾಗಿ ಯುಪಿಎಸ್‍ಸಿ ಮತ್ತು ಕೆಪಿಎಸ್‍ಸಿ ಮೂಲಕ ಪ್ರಸಕ್ತ ಸಾಲಿನಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯೋಜಿಸುವ ತರಬೇತಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.


ಲಾರಿ, ಟ್ರಕ್, ಆಟೋ, ಪ್ರವಾಸಿ ವಾಹನ, ಪ್ರಯಾಣಿಕರ ವಾಹನ ಸೇರಿದಂತೆ ವಿವಿಧ ರೀತಿಯ ವಾಹನಗಳನ್ನು ದಿನನಿತ್ಯ ಓಡಿಸುವ ಡ್ರೈವರ್ ಹಾಗೂ ಕ್ಲೀನರ್‍ಗಳ ಬದುಕು ರಕ್ಷಿಸಲು ಮತ್ತು ಅವರ ಮಕ್ಕಳು, ಕುಟುಂಬ ಸದಸ್ಯರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿಯಂತೆ ಡ್ರೈವರ್ ಬೋರ್ಡ್(ಚಾಲಕರ ಕಲ್ಯಾಣ ಮಂಡಳಿ) ಸ್ಥಾಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು  ಶೀಘ್ರದಲ್ಲಿಯೇ ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.


ಇದನ್ನೂ ಓದಿ: Gadag: ಗಂಡ-ಹೆಂಡಿರ ಜಗಳದಲ್ಲಿ ಗ್ರಾಮದ ಮುಖಂಡ ಬಲಿ..!


ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲು ಸುಮಾರು 70 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 750 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ತರಬೇತಿ ನೀಡಲು ಬೆಂಗಳೂರಿನ ಐದು ಮತ್ತು ಧಾರವಾಡ (DHARWAD) ದ ಆರು ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.ತರಬೇತಿ ವೆಚ್ಚವನ್ನು ಆಯ್ಕೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ಜಮೆ ಮಾಡುತ್ತದೆ.ಪಾರದರ್ಶಕತೆ ಕಾಪಾಡುವುದು ಇದರ ಉದ್ದೇಶವಾಗಿದೆ. ಪ್ರತಿಭೆಗಳ ಪಲಾಯನವಾಗಬಾರದು, ಕಾರ್ಮಿಕ ಮಕ್ಕಳು ಉತ್ತಮ ಅಧಿಕಾರಿಗಳಾಗಿ ರೂಪಗೊಳ್ಳಬೇಕು ಎಂಬುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.


ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಸುಮಾರು 400 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಡಿಬಿಟಿ ಮೂಲಕ ಶಿಷ್ಯವೇತನವನ್ನು 1,56000 ದಷ್ಟು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ.ಐಐಟಿ, ಐಐಐಟಿ ಸೇರಿದಂತೆ ರಾಷ್ಟ್ರೀಯ ಮಟ್ಟದ ಎಲ್ಲ ರೀತಿಯ ತಾಂತ್ರಿಕ ಹಾಗೂ ಇತರ ಉನ್ನತ ಶಿಕ್ಷಣ ಕಲಿಯಲು ಕಾರ್ಮಿಕರ ಮಕ್ಕಳಿಗೆ ಉಚಿತ ಅವಕಾಶ ನೀಡಿ, ಇಲಾಖೆಯಿಂದ ವೆಚ್ಚ ಭರಿಸಲು ನಿರ್ಧರಿಸಲಾಗಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.