Shakti Yojana: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಬದ್ಧವಾಗಿದ್ದು, ಯೋಜನೆಗಳಿಗೆ ಅನುಮೋದನೆಯನ್ನೂ ನೀಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಒದಗಿಸುವ "ಶಕ್ತಿ ಯೋಜನೆ"ಗೂ ಕೂಡ ಅನುಮೋದನೆ ದೊರೆತಿದ್ದು, ರಾಜ್ಯ ಸಾರಿಗೆ ನಿಗಮಗಳು ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೂಡ ಕೈಗೊಳ್ಳುತ್ತಿದೆ.
ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.
ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ "ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಇದರಲ್ಲಿ ಪ್ರಸ್ತುತ, ರಾಜ್ಯ ಸರ್ಕಾರದ "ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎಸಿ ಬಸ್ ಮತ್ತು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ- ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ; ಮುಖ್ಯಮಂತ್ರಿ ಸಿದ್ದರಾಮಯ್ಯ
"ಶಕ್ತಿ ಯೋಜನೆ" ಅನುಮೋದನೆ ಆದೇಶದಲ್ಲಿ ಏನೇನಿದೆ?
>> ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅವಕಾಶ.
>> ರಾಜ್ಯದ ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ ಅನ್ವಯ.
>> ಐಷಾರಾಮಿ ಬಸ್, ಎಸಿ ಸ್ಲೀಪರ್ ನಾನ್ ಎಸಿ ಸ್ಲೀಪರ್, ಐರಾವತ, ಕ್ಲಬ್ ಕ್ಲಾಸ್, ರಾಜಹಂಸ, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ, ಸೇರಿ ಈ ರೀತಿ ಬಸ್ ಗಳಲ್ಲಿ ಪ್ರಯಾಣಕ್ಕೆ ಅವಕಾಶ ಇಲ್ಲ.
>> ಬಿಎಂಟಿಸಿ ಬಸ್ ಹೊರತುಪಡಿಸಿ ಸೀಟ್ ಗಳನ್ನ ಕಾಯ್ದಿರಿಸಲು ಅವಕಾಶ.
>> ಶೇಕಡ 50% ರಷ್ಟು ಆಸನಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಅವಕಾಶ ಇರುತ್ತದೆ.
>> ಈ ಯೋಜನೆಯಲ್ಲಿ ಶೂನ್ಯ ಟಿಕೆಟ್ ದರ ಆಧಾರ ಮತ್ತು ಶಕ್ತಿ ಸ್ಮಾರ್ಟ್ ಕಾರ್ಡ್ ಬಳಕೆ
>> ಸೇವಾಸಿಂಧು ಮೂಲಕ ಅರ್ಜಿ ಪಡೆದುಕೊಳ್ಳಬಹುದು.
>> ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
>> ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರದ ಇಲಾಕೆಹ್/ಸರ್ಕಾರಿ ಸ್ವಾಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕಾಡು.
ಇದನ್ನೂ ಓದಿ- ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೆ ಕೌಂಟ್’ಡೌನ್: ಈ ಭಾಗಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಎಚ್ಚರಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ