'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಈಗ ನೆನಪಾಗಿದೆ: ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಕಿಡಿ

HD Kumaraswamy on DK Brothers:'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Edited by - Zee Kannada News Desk | Last Updated : Jan 4, 2022, 11:28 AM IST
  • ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ
  • ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು
  • ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ಚೆನ್ನಾಗಿ ಗೊತ್ತು
  • ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ
  • ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಟ್ವೀಟ್
'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಈಗ ನೆನಪಾಗಿದೆ: ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಕಿಡಿ title=
ಕುಮಾರಸ್ವಾಮಿ

ಬೆಂಗಳೂರು: ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ 'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ (Fromer CM Kumaraswamy) ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದಿದ್ದಾರೆ.

 

 

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ ಎಂದು ಟ್ವೀಟ್ (HD Kumaraswamy on DK Brothers) ಮಾಡಿದ್ದಾರೆ.

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದಿದ್ದಾರೆ.

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರು ತಾಲಿಬಾನಿಗಳಿಗೂ ಸ್ಪರ್ಧೆ ನೀಡುವ ರೀತಿ ವರ್ತಿಸುತ್ತಿದ್ದಾರೆ: ಸಿ.ಟಿ.ರವಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News