ಬೆಂಗಳೂರು: ಜೂನ್ 25ರಿಂದ ಪ್ರಾರಂಭವಾಗುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಮರ್ಪಕ ಮತ್ತು ಸುಗಮವಾಗಿ ನಡೆಸಲು ಗೃಹ ಮತ್ತು ಆರೋಗ್ಯ ಇಲಾಖೆಗಳ ಹೆಚ್ಚಿನ ಸಹಾಯ-ಸಹಕಾರಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಮಾಹಿತಿ ನೀಡಿದ್ದಾರೆ.
 
ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳ ಪೂರ್ವಭಾವಿ ಸುರಕ್ಷತಾ ಕ್ರಮಗಳ ಕುರಿತು ವಿಧಾನಸೌಧದಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು (B Sriramulu) ಹಾಗೂ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು. ಆರೋಗ್ಯ ಇಲಾಖೆಯ ಹೆಚ್ಚಿನ ಸಹಾಯ ಸಹಕಾರದ ಅಗತ್ಯವಿದೆ ಎಂದು ಆರೋಗ್ಯ ಸಚಿವರಿಗೆ ಮನವಿ ಮಾಡಿದರು.


COMMERCIAL BREAK
SCROLL TO CONTINUE READING

ಇಡೀ ಜಗತ್ತನ್ನೇ ತೊಂದರೆಯಲ್ಲಿ ಸಿಲುಕಿಸಿರುವ ಕೊರೋನಾವೈರಸ್  (Coronavirus) ಸಾಂಕ್ರಾಮಿಕ ರೋಗದಿಂದಾಗಿ ತಡವಾಗಿ ನಡೆಯುತ್ತಿರುವ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮತ್ತಾವುದೇ ಅಡ್ಡಿ ಆತಂಕ ಇಲ್ಲದೆ ಸುಗಮ ನಿರ್ವಹಣೆ ಮತ್ತು ಪರೀಕ್ಷೆಯ ಪಾವಿತ್ರ್ಯ ಕಾಪಾಡುವ ಹಿನ್ನೆಲೆಯಲ್ಲಿ ಎಂದಿಗಿಂತ ಈ ಬಾರಿ ಆರೋಗ್ಯ ಇಲಾಖೆಯ ಸಹಕಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟ ಸುರೇಶ್‍ಕುಮಾರ್, ಕೋವಿಡ್-19 (Covid-19)  ಹಿನ್ನೆಲೆಯಲ್ಲಿ ವಿಶೇಷವಾಗಿ ಇಲಾಖೆ ಕೈಗೊಂಡ ಕ್ರಮಗಳು ಮತ್ತು ಆರೋಗ್ಯ ಇಲಾಖೆ ಯಾವ ಯಾವ ಹಂತದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ವಿವರಿಸಿದರು. 


ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸ ಹೆಚ್ಚಿಸಲು ಆದ್ಯತೆ: ಸುರೇಶ್‍ಕುಮಾರ್


ಎಸ್‍ಎಸ್‍ಎಲ್‍ಸಿ ಪರೀಕ್ಷೆ ವೇಳೆ ಆರೋಗ್ಯ ಇಲಾಖೆಯ ಸಂಪೂರ್ಣ ಸಹಕಾರದ ಭರವಸೆ ನೀಡಿದ  ಶ್ರೀರಾಮುಲು!
ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿದ್ದರೂ ಈ ಬಾರಿಯ ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದರು.


ರಾಜ್ಯದ 8.5 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಹಾಗೂ ಅವರ ಪೋಷಕರು ಅತ್ಮವಿಶ್ವಾಸವನ್ನ ಕಳೆದುಕೊಳ್ಳದ ರೀತಿಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಆರೋಗ್ಯ ಸಹಾಯಕ/ ಆಶಾ ಕಾರ್ಯಕರ್ತೆಯರನ್ನ ನಿಯೋಜಿಸಲಾಗುವುಡು ಎಂದು ತಿಳಿಸಿದ ಸಚಿವ ಶ್ರೀರಾಮುಲು, ಮಕ್ಕಳ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಉಚ್ಛ ನ್ಯಾಯಾಲಯವೂ ಆದೇಶ ಮಾಡಿರುವುದರಿಂದ ಇದರಲ್ಲಿ ಆರೋಗ್ಯ ಇಲಾಖೆಯ ಜವಾಬ್ದಾರಿಯೂ ಹಿರಿದಾಗಿದ್ದು ಪರೀಕ್ಷೆಯ ಸುಗಮ ನಿರ್ವಹಣೆಗೆ ಇಲಾಖೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು. ಹಾಗೆಯೇ ಈ ಕುರಿತು ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆದೇಶ ಹೊರಡಿಸಬೇಕು ಮತ್ತು ಪರೀಕ್ಷೆ ಕುರಿತು ಹೆಚ್ಚಿನ ಆಸ್ಥೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕೆಂದು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 


ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ಡಿಸಿನ್ಫೆಕ್ಟ್ ಮಾಡಲು ಆರೋಗ್ಯ ಇಲಾಖೆ‌ ಸಹಕರಿಸಲಿದ್ದು ಕಂಟೇನ್ ಮೆಂಟ್ ವಲಯಗಳಿಂದ ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಎನ್-95 ಮಾಸ್ಕ್ ಗಳನ್ನು ಪೂರೈಸಲಿದೆ. ತಾಲ್ಲೂಕು ಹಂತದಲ್ಲಿ‌ ಆಂಬ್ಯುಲೆನ್ಸ್ ವ್ಯವಸ್ಥೆ, ಎಲ್ಲ ಪರೀಕ್ಷಾ ಕೇಂದ್ರಗಳು ಕ್ವಾರಂಟೈನ್ (Quarantine) ಹಣೆಪಟ್ಟಿಯಿಂದ ಮುಕ್ತಿ, ಅನ್ಯ ರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು‌ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ‌ಸಂಪೂರ್ಣ ಸಹಕಾರ ನೀಡಲಾಗುವುದೆಂದು ಭರವಸೆ‌ ನೀಡಿದರು.‌