ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು.


COMMERCIAL BREAK
SCROLL TO CONTINUE READING

ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡವು  ಸೌಜನ್ಯದ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಹಾಜರಿದ್ದರು.


ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ.


ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ತಯಾರಿ, ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ


ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದರು.


ಕಂಪನಿಯು ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.


ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡುವುದಾಗಿಯೂ ಅವರು ತಿಳಿಸಿದರು. 


ಇದನ್ನೂ ಓದಿ: ಗ್ಯಾರೆಂಟಿಗಳ ಅನುಷ್ಠಾನಕ್ಕೆ ಆರ್ಥಿಕ ಸವಾಲು: ಅಧಿಕಾರಿಗಳ ಸಲಹೆ


ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ. ಕಂಪನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಇದ್ದರು.


ಇದಕ್ಕೆ ಮುನ್ನ ಜುಬಿಲಿಯಂಟ್ ಫುಡ್ ವರ್ಕ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್  ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್  ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿದ್ದರು.


ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಇದ್ದರು.


ಇದನ್ನೂ ಓದಿ: ಚಾಮರಾಜನಗರದಲ್ಲಿ ಐ ಎಎಫ್ ತರಬೇತಿ ವಿಮಾನ ಪತನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.