close

News WrapGet Handpicked Stories from our editors directly to your mailbox

ಅಂಬಿ ಅಂತ್ಯಕ್ರಿಯೆಗೆ ಬಾರದ ರಮ್ಯಾ ಮನೆಗೆ ಮಂಡ್ಯದಲ್ಲಿ ಫುಲ್ ಪ್ರೊಟೆಕ್ಷನ್

ಮಂಡ್ಯದ ಮನೆ ಮಗಳಾಗಿ ಅಂಬರೀಶ್ ಅಂತ್ಯಕ್ರಿಯೆಗೆ ರಮ್ಯಾ ಬಾರದಿದ್ದುದು ಜನತೆಯ ತೀವ್ರ ಅಸಮಾಧಾನಕ್ಕೆ ಕಾರಣವಾಗಿತು. 

Updated: Nov 28, 2018 , 12:43 PM IST
ಅಂಬಿ ಅಂತ್ಯಕ್ರಿಯೆಗೆ ಬಾರದ ರಮ್ಯಾ ಮನೆಗೆ ಮಂಡ್ಯದಲ್ಲಿ ಫುಲ್ ಪ್ರೊಟೆಕ್ಷನ್

ಮಂಡ್ಯ: ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅಂತ್ಯಕ್ರಿಯೆಗೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಡ್ಯದಲ್ಲಿ ರಮ್ಯ ಮನೆಗೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 

ಅಂಬರೀಶ್ ಅಂತ್ಯಕ್ರಿಯೆಗೆ ಇಡೀ ಕನ್ನಡ ಚಿತ್ರರಂಗವೇ ಆಗಮಿಸಿತ್ತು. ನಟ ದರ್ಶನ್ ಕೂಡ ಸ್ವೀಡನ್ ನಿಂದ ಬಂದಿದ್ದರು. ಆದರೆ ರಮ್ಯ ಮಾತ್ರ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿ ಸುಮ್ಮನಾಗಿದ್ದರು. ಮಂಡ್ಯದ ಮನೆ ಮಗಳಾಗಿ ರಮ್ಯಾ ಬಾರದಿದ್ದುದು ಜನತೆಯ ತೀವ್ರ ಅಸಮಾಧಾನಕ್ಕೆ ಕಾರಣವಾಯಿತು. ಅಷ್ಟೇ ಅಲ್ಲದೆ, ರಮ್ಯ ಅವರಿಗೆ ಶ್ರದ್ಧಾಂಜಲಿ ಸೂಚಿಸಿ ನಗರದೆಲ್ಲೆಡೆ ಭಾವಚಿತ್ರ ಹಾಕಿದ್ದರು. 

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮಂಡ್ಯದ ವಿದ್ಯಾನಗರದಲ್ಲಿರುವ ರಮ್ಯಾ ನಿವಾಸಕ್ಕೆ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದೆ.