'ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ'

ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Feb 18, 2022, 04:14 PM IST
  • ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
'ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ' title=

ಬೆಂಗಳೂರು: ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆ ಕುರಿತಾಗಿ ಸಿದ್ಧರಾಮಯ್ಯ ಹೇಳಿದ್ದಿಷ್ಟು...

ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ-Siddaramaiah : ಹಿಜಾಬ್ ಪರವಾಗಿ ನಿಂತ ಸಿದ್ದರಾಮಯ್ಯ : ಸುತ್ತೋಲೆ ವಾಪಾಸ್ ಪಡೆಯಲು ಆಗ್ರಹ!

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗುತ್ತದೆ. 

ಇದನ್ನೂ ಓದಿ-Ahmedabad serial bomb blast case: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ ಶಿವಕುಮಾರ್ ಅವರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ.ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ.ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿ ಪಕ್ಷದವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡಲು ಹೊರಟಿದ್ದಾರೆ.ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

ಇದನ್ನೂ ಓದಿ-ಧರಣಿ ಕೈ ಬಿಡದ ಕಾಂಗ್ರೆಸ್ : ಸೋಮವಾರದ ಬಳಿಕ ಸದನ ಅನಿರ್ದಿಷ್ಟಾವಧಿ ಗೆ ಮುಂದೂಡಲು ಸರ್ಕಾರ ತೀರ್ಮಾನ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News