Mangalore News : ಮಾಜಿ ಶಾಸಕ ಕೆ.ವಸಂತ ಬಂಗೇರ ಅಂತ್ಯಕ್ರಿಯೆ
MLA K Vasanta Bangera Funeral : ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ ನೆರವೇರಿದೆ.
ಮಂಗಳೂರು: ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ ನೆರವೇರಿದೆ. ಬೆಳ್ತಂಗಡಿ ನಗರದ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದರು.
ಬೆಳ್ತಂಗಡಿ ಕ್ರೀಡಾಂಗಣದಿಂದ ಹೊರಟ ಅಂತಿಮ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿದ್ದರು. ಕುವೆಟ್ಟು ಗ್ರಾಮದ ಕೇದೆ ಮನೆಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಇದನ್ನೂ ಓದಿ: Bengaluru Water Crisis: ಅಪಾರ್ಟ್‌ಮೆಂಟ್ ಮಾಲೀಕರೇ ಎಚ್ಚರ..! ಏರೇಟರ್ ಅಳವಡಿಸದಿದ್ದರೇ ಬೀಳುತ್ತೆ ದಂಡ!
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ ಅಂತಿಮ ನಮನ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್ ಅಂತಿಮ ನಮನ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ನೇತೃತ್ವದಲ್ಲಿ ಸರಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ ನೆರವೇರಿದೆ.
ಇದನ್ನೂ ಓದಿ: SIT ತನಿಖೆಯಲ್ಲಿ ಹಲವು ಲೋಪದ ಅಂಶಗಳನ್ನ ಉಲ್ಲೇಖಿಸಿ ಆರೋಪ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.