ಮೇ ತಿಂಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ತಾಪಮಾನ ಏರಿಕೆ, ಹವಾಮಾನ ಇಲಾಖೆ ಎಚ್ಚರಿಕೆ
ದಿನೇ ದಿನೇ ತಾಪಮಾನದ ಹೆಚ್ಚಳದ ಹಿನ್ನೆಲೆಯಲ್ಲಿ ಈಗ ಹವಾಮಾನ ಇಲಾಖೆ ಮುಂದಿನ ತಿಂಗಳು ಮತ್ತಷ್ಟು ತಾಪಮಾನ ಅಧಿಕಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರು: ದಿನೇ ದಿನೇ ತಾಪಮಾನದ ಹೆಚ್ಚಳದ ಹಿನ್ನೆಲೆಯಲ್ಲಿ ಈಗ ಹವಾಮಾನ ಇಲಾಖೆ ಮುಂದಿನ ತಿಂಗಳು ಮತ್ತಷ್ಟು ತಾಪಮಾನ ಅಧಿಕಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಪಕ್ಷದಲ್ಲಿ ಕಡೆಗಣಿಸುತ್ತಿರುವುದಕ್ಕೆ ಮಾರ್ಮಿಕ ಒಗಟಿನ ಪೋಸ್ಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್!
ಹವಾಮಾನ ಇಲಾಖೆ ಪ್ರಕಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಟ ತಾಪಮಾನ ದಾಖಲಾಗಿದೆ ಎನ್ನಲಾಗಿದೆ.ಅದರಲ್ಲೂ ಪ್ರಮುಖವಾಗಿ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಅಚ್ಚರಿ ಎಂದರೆ ಈ ಬಾರಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಅಧಿಕವಿದೆ.
ಇದನ್ನೂ ಓದಿ: ತೇರದಾಳ ಕ್ಷೇತ್ರ : ಕಾಂಗ್ರೆಸ್,ಬಿಜೆಪಿಗೆ ಸೆಡ್ಡು ಹೊಡೆಯಲು ಅತೃಪ್ತರಿಂದ ಸ್ವಾಮೀಜಿ ಕಣಕ್ಕೆ
ಇನ್ನೂ ರಾಯಚೂರು (41), ಬಳ್ಳಾರಿ (40) ವಿಜಯಪುರ (40.4) ನಲ್ಲಿ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. ಮುಂದಿನ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ವಿವಿಧೆಡೆಗಳಲ್ಲಿ ಮಳೆಯ ವಾತಾವರಣವಿದ್ದರೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಹಾಗೂ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹೇಳಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.