ಬೆಂಗಳೂರು : ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಿದರು.


COMMERCIAL BREAK
SCROLL TO CONTINUE READING

ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ‌ ನೀಡಿದರು.


ಇದನ್ನೂ ಓದಿ: ನಮ್ಮಲ್ಲಿ ಮೂರ್ನಾಲ್ಕು ಜನಕ್ಕೆ ಅಸಮಧಾನ ಇತ್ತು : ಕೆ.ಎಸ್ ಈಶ್ವರಪ್ಪ


ಎನ್‌ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ‌ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಕ್ರಿಸ್‌ಮಸ್ ಹಬ್ಬ, ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಹೊರಗಡೆಯಿಂದ ಬರುವರ ಚಲನವಲನಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು ಎಂದು ಹೇಳಿದರು.


ಹೊಸ ವರ್ಷ ಆಚರಿಸಲು ಜನ ಸೇರುವ ಪ್ರಮುಖ ಸ್ಥಳಗಳನ್ನು ಗುರುತಿಸಿ, ಪೊಲೀಸ್ ಅಧಿಕಾರಿಗಳು ಪರಿಶೀಲಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಬೇಕು. ಎಸ್‌ಡಿಆರ್‌ಎಫ್‌ ತಂಡಗಳು ಇರಬೇಕು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್‌ಗಳಲ್ಲಿ ಬಿಬಿಎಂಪಿಯವರು ತಾತ್ಕಲಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು. ನಗರದ ಎಲ್ಲ ವಿಭಾಗದ ಡಿಸಿಪಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಭೇಟಿ ನೀಡಿ, ಡಿಸೆಂಬರ್ 31ರ ತಡರಾತ್ರಿ ತುರ್ತು ಚಿಕಿತ್ಸೆಗಾಗಿ ಅಲರ್ಟ್ ಇರುವಂತೆ ತಿಳಿಸಬೇಕು ಎಂದರು.


ಇದನ್ನೂ ಓದಿ:ಐಶ್ವರ್ಯ ಜೊತೆಗಿನ  ಮನಸ್ತಾಪದ ಮಧ್ಯೆಯೇ ಕಂಡು ಬಂತು ಸಲ್ಮಾನ್ - ಅಭಿಷೇಕ್ ಸ್ನೇಹ ! ಇಲ್ಲಿದೆ ವಿಡಿಯೋ 


ಎಂಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಎಲೆಕ್ಟ್ರಾನಿಕ್ ಸಿಟಿಗಳಲ್ಲಿ‌ನ ರಸ್ತೆಗಳಲ್ಲಿ ಪಬ್‌ಮತ್ತು ಬಾರ್, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಿದ್ದಾರೆ. ಇದರಿಂದ ಅವಘಡಗಳಾಗುವ ಸಾಧ್ಯತೆ ಇರುತ್ತದೆ. ಅಗ್ನಿಶಾಮಕ ದಳ‌ ಸಿಬ್ಬಂದಿಗಳು ಅಲರ್ಟ್ ಆಗಿರಬೇಕು. ಪಬ್ ಮತ್ತು ಬಾರ್‌ಗಳು ಸುರಕ್ಷತಾ ಕ್ರಮ‌ಕೈಗೊಂಡಿವೆಯೇ ಎಂಬುದನ್ನು ಪರಿಶೀಲಿಸಿ. ಮೇಲ್ಚಾವಣಿಗಳಲ್ಲಿ ಕಿಚನ್ ತೆರೆಯಲು ಅವಕಾಶ ನೀಡಬೇಡಿ. ಮದ್ಯದ ಅಂಗಡಿಗಳು ಎಂದಿನಂತೆಯೇ ತೆರೆದಿರಬೇಕು. ಹೆಚ್ಚಿನ ಸಮಯಾವಕಾಶ ನೀಡುವುದು ಬೇಡ ಎಂದು‌ ಸೂಚಿಸಿದರು.


ಪೊಲೀಸ್ ಹೆಲ್ಪ್‌ಡೆಸ್ಕ್:- ನ್ಯೂ ಇಯರ್ ಸೆಲೆಬ್ರೇಷನ್‌ಗಾಗಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ತಾತ್ಕಲಿಕ "ಪೊಲೀಸ್ ಹೆಲ್ಪ್ ಡೆಸ್ಕ್" ತೆರೆಯಬೇಕು. ಈ ಬಗ್ಗೆ ಜನರಿಗೆ ಅನೌನ್ಸ್‌ಮೆಂಟ್ ಮಾಡಬೇಕು. ಮೆಟ್ರೋ ರೈಲುಗಳು ಹೆಚ್ಚಿನ ಅವಧಿಯವರೆಗೆ ಸಂಚರಿಸಲಿ. ಅಲ್ಲದೇ, ಬಿಎಂಟಿಸಿ ವತಿಯಿಂದ ಪ್ರತ್ಯೇಕ ಬಸ್‌ಗಳನ್ನು ಬಿಡಬೇಕು. ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.


ಇದನ್ನೂ ಓದಿ: ಮಧ್ಯಮ ವರ್ಗದವರಿಗೂ ಉಚಿತ ಆರೋಗ್ಯ ವಿಮೆ : 2024ರ ಚುನಾವಣೆಗೂ ಮುನ್ನ ಸರ್ಕಾರ ದೊಡ್ಡ ಯೋಜನೆ 


ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಕಮಾಲ್ ಪಂತ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.