ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎರಡನೇ ತಂಡದಲ್ಲಿ 5 ಆನೆಗಳು ಇಂದು ಕಾಡಿನಿಂದ ನಾಡಿಗೆ ಹೊರಟಿವೆ.


COMMERCIAL BREAK
SCROLL TO CONTINUE READING

ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಹೊರುವ ಅಭಿಮನ್ಯು ತಂಡಕ್ಕೆ ಇಂದು ಮಹೇಂದ್ರ, ಸುಗ್ರೀವ, ಹಿರಣ್ಯ, ಲಕ್ಷ್ಮೀ ಮತ್ತು ಪ್ರಶಾಂತ ಆನೆಗಳು ಸೇರ್ಪಡೆಯಾಗಲಿವೆ.


ಇದನ್ನೂ ಓದಿ: ನಿಮ್ಮ ಬಳಿ ಇದೊಂದಿದ್ದರೆ ಸಾಕು, ನಯಾ ಪೈಸೆ ಖರ್ಚಿಲ್ಲದೆ ತಿಂಗಳಿಗೆ 1 ಲಕ್ಷದವರೆಗೆ ಗಳಿಸಬಹುದು!


ವೀರನಹೊಸಹಳ್ಳಿಯಲ್ಲಿ ಆ.21ರಂದು ವಿಧ್ಯುಕ್ತವಾಗಿ ಆನೆಗಳಿಗೆ ಪೂಜೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಮೊದಲ ತಂಡದಲ್ಲಿ ಅಭಿಮನ್ಯು, ಗೋಪಿ, ಭೀಮ, ಧನಂಜಯ, ರೋಹಿತ, ಏಕಲವ್ಯ ಕಂಜನ್, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಮೈಸೂರಿಗೆ ಆಗಮಿಸಿದ್ದವು. 


ಇಂದು ಸಂಜೆ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರು ಅರಮನೆ ಆವರಣಕ್ಕೆ ಆಗಮಿಸಲಿದ್ದು, ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಗೌರಿ-ಗಣೇಶ ಹಬ್ಬಕ್ಕಾಗಿ ಊರಿಗೆ ಹೋಗುವವರಿಗೆ KSRTC ಗುಡ್ ನ್ಯೂಸ್, ಟಿಕೆಟ್ ಬುಕ್ಕಿಂಗ್‌ನಲ್ಲೂ ರಿಯಾಯಿತಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.