ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು: ಶಾಸಕ ಸ್ಥಾನದ ಅನರ್ಹತೆಯ ತೂಗುಗತ್ತಿಯಿಂದ ಬಚಾವ್

ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಚುನಾವಣಾ ಆಯೋಗಕ್ಕೆ ಈ ಬಗ್ಗೆ ಪತ್ರ ಬರೆದಿದ್ದರು. ಈಗ ಜಾಮೀನು ಸಿಕ್ಕಿರುವ ಕಾರಣ, ಅನರ್ಹತೆಯನ್ನು ಹಿಂಪಡೆದಿರುವ ಬಗ್ಗೆ ಮತ್ತೊಂದು ಪತ್ರ ಬರೆಯಲಿದ್ದಾರೆ.

Written by - Manjunath Naragund | Last Updated : Jun 11, 2025, 12:45 PM IST
  • ರೆಡ್ಡಿ ಜೈಲು ಶಿಕ್ಷೆಯಿಂದಾಗಿ ಶಾಸಕ ಸ್ಥಾನ ಕಳೆದುಕೊಂಡಿದ್ದರು
  • ಜಾಮೀನು ಷರತ್ತಿನಂತೆ ರೆಡ್ಡಿ ದೇಶ ಬಿಡದಂತೆ ಮತ್ತು ಪಾಸ್‌ಪೋರ್ಟ್ ಸರೆಂಡರ್ ಮಾಡಬೇಕು
  • ಈ ಬೆಳವಣಿಗೆಯಿಂದ ರೆಡ್ಡಿಯ ಶಾಸಕ ಸ್ಥಾನ ಉಳಿದಿದ್ದು, ಗಂಗಾವತಿ ರಾಜಕೀಯದಲ್ಲಿ ಹೊಸ ಚರ್ಚೆ ಶುರುವಾಗಿದೆ.
ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು: ಶಾಸಕ ಸ್ಥಾನದ ಅನರ್ಹತೆಯ ತೂಗುಗತ್ತಿಯಿಂದ ಬಚಾವ್

ಬೆಂಗಳೂರು: ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಕ್ರಮ ಗಣಿಗಾರಿಕೆ ಆರೋಪದಡಿ ವಿಧಿಸಲಾಗಿದ್ದ ಜೈಲು ಶಿಕ್ಷೆಯಿಂದ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು ದೊರೆತಿದೆ. ಈ ಜಾಮೀನಿನೊಂದಿಗೆ ಅವರ ಶಾಸಕ ಸ್ಥಾನದ ಮೇಲಿದ್ದ ಅನರ್ಹತೆಯ ತೂಗುಗತ್ತಿಯಿಂದ ರೆಡ್ಡಿ ತಾತ್ಕಾಲಿಕವಾಗಿ ಬಚಾವ್ ಆಗಿದ್ದಾರೆ.

Add Zee News as a Preferred Source

ಒಬುಲಾಪುರಂ ಮೈನಿಂಗ್ ಕೇಸ್‌ನಲ್ಲಿ ಸಿಬಿಐ ಕೋರ್ಟ್ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಅನರ್ಹತೆ ಘೋಷಣೆಯಾಗಿತ್ತು. ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ರೆಡ್ಡಿಯ ಬಂಧನದ ಬಳಿಕ ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಶಾಸಕ ಸ್ಥಾನವನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದರು. ಆದರೆ, ರೆಡ್ಡಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ, ವಿಶಾಲಾಕ್ಷಿ ಅವರು ಚುನಾವಣಾ ಆಯೋಗಕ್ಕೆ ಮತ್ತೊಂದು ಪತ್ರದ ಮೂಲಕ ಶಾಸಕ ಸ್ಥಾನದ ಅನರ್ಹತೆಯನ್ನು ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದರಿಂದ ಗಾಲಿ ಜನಾರ್ದನ ರೆಡ್ಡಿಯ ಶಾಸಕ ಸ್ಥಾನ ಸದ್ಯಕ್ಕೆ ಉಳಿದುಕೊಂಡಿದೆ.

ಇದನ್ನೂ ಓದಿ: ಓವರ್ ಟೇಕ್ ಮಾಡಲು ಹೋಗಿ ಉರುಳಿಬಿದ್ದ ಖಾಸಗಿ ಶಾಲಾ ಬಸ್.. 30ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಜಾಮೀನು ಷರತ್ತಿನಂತೆ ರೆಡ್ಡಿ ದೇಶ ಬಿಟ್ಟು ಹೋಗದಂತೆ ಹಾಗೂ ತಮ್ಮ ಪಾಸ್‌ಪೋರ್ಟ್ ಸರೆಂಡರ್ ಮಾಡಬೇಕೆಂದು ಕೋರ್ಟ್ ಸೂಚಿಸಿದೆ. ಈ ಬೆಳವಣಿಗೆಯಿಂದ ಗಂಗಾವತಿ ಕ್ಷೇತ್ರದ ರಾಜಕೀಯದಲ್ಲಿ ಹೊಸ ತಿರುವು ಸೃಷ್ಟಿಯಾಗಿದ್ದು, ರೆಡ್ಡಿಯ ರಾಜಕೀಯ ಭವಿಷ್ಯದ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಈ ರಿಲೀಫ್‌ನೊಂದಿಗೆ ಗಾಲಿ ಜನಾರ್ದನ ರೆಡ್ಡಿ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣದ ತನಿಖೆ ಮತ್ತು ಕಾನೂನು ಪ್ರಕ್ರಿಯೆಯ ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ಗಮನಾರ್ಹ ಪರಿಣಾಮ ಬೀರಲಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

 

About the Author

Trending News