ಗ್ಯಾಂಬ್ಲಿಂಗ್ ಮುಕ್ತ ಕರ್ನಾಟಕ ಮಾಡುತ್ತೇವೆ: ಗೃಹ ಸಚಿವ ಅರಗ ಜ್ಞಾನೇಂದ್ರ
ಗ್ಯಾಂಬ್ಲಿಂಗ್ ಮುಕ್ತ ಕರ್ನಾಟಕ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕವನ್ನು ಗ್ಯಾಂಬ್ಲಿಂಗ್ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ(Araga Jnanendra) ಹೇಳಿದ್ದಾರೆ. ಮಂಗಳವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದವು. ಇದರಲ್ಲಿ ಪ್ರಮುಖವಾಗಿ ಗ್ಯಾಂಬ್ಲಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಸದನಕ್ಕೆ ತಿಳಿಸಿದರು.
ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ‘ಗ್ಯಾಂಬ್ಲಿಂಗ್(Gambling)ಒಂದು ಸಾಮಾಜಿಕ ಪಿಡುಗು. ರಾಜ್ಯದಲ್ಲಿ ಇದನ್ನು ಸಂಪೂರ್ಣವಾಗಿ ನಿಗ್ರಹಿಸುವುದಕ್ಕೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪೊಲೀಸ್ ಇಲಾಖೆಗಳಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ್ದೇವೆ. ಬೀಟ್ ಪೊಲೀಸರು, ಗುಪ್ತ ಮಾಹಿತಿ ಸಂಗ್ರಹ ಸಿಬ್ಬಂದಿ ಇವರೆಲ್ಲರ ಮಾಹಿತಿ ಆಧಾರದ ಮೇಲೆ ವಿಷಯ ಸಂಗ್ರಹಿಸಿ ಗ್ಯಾಂಬ್ಲಿಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ’ ಭರವಸೆ ನೀಡಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಮತ್ತು ಎಚ್‌ಡಿಕೆ ಹುಸಿ ಜ್ಯಾತ್ಯತೀತ ನಾಯಕರು: ನಟ ಚೇತನ್ ಅಹಿಂಸಾ
‘ಎಲ್ಲಿ ಗ್ಯಾಂಬ್ಲಿಂಗ್ ನಡೆಯುತ್ತದೆಯೋ, ಯಾರು ಇದರಲ್ಲಿ ಭಾಗಿಯಾಗುವರೋ ಅವರ ಮೇಲೆ ಹದ್ದಿನ ಕಣ್ಣಿಡಲಾಗುವುದು. ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಗ್ಯಾಂಬ್ಲಿಂಗ್ ಮುಕ್ತ ಕರ್ನಾಟಕ(Gambling Free Karnataka) ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಆನ್ಲೈನ್ ಜೂಜಿನ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಗ್ಯಾಂಬ್ಲಿಂಗ್ ವಿರುದ್ಧದ ಹೆಚ್ಚಿನ ಮತ್ತು ಕಠಿಣ ಕ್ರಮ ಜರುಗಿಸಲು ಕರ್ನಾಟಕ ಪೊಲೀಸ್ ತಿದ್ದುಪಡಿ ಮಸೂದೆಯನ್ನು 20-21ಕ್ಕೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ(karnataka police act 1963) ಕಾನೂನನ್ನು ಪರಿಷ್ಕರಣೆ ಮಾಡಲು ಇಂದು ಅಥವಾ ನಾಳೆ ಸದನದಲ್ಲಿ ಮಸೂದೆ ಮಂಡಿಸಲಾಗುವುದು. ಇದಕ್ಕೆ ಎಲ್ಲ ಸದಸ್ಯರ ಸಹಕಾರ ಸಿಕ್ಕರೆ ಪೊಲೀಸ್ ಇಲಾಖೆಯ ಕೈಬಲಪಡಿಸಿದಂತಾಗುತ್ತದೆ. ಕರ್ನಾಟಕವನ್ನು ಸಂಪೂರ್ಣವಾಗಿ ಗ್ಯಾಂಬ್ಲಿಂಗ್ ಮುಕ್ತ ರಾಜ್ಯವನ್ನಾಗಿ ಮಾಡಬಹುದು’ ಎಂದು ಹೇಳಿದರು
ಇದನ್ನೂ ಓದಿ: ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ- ಸಿದ್ಧರಾಮಯ್ಯ
ಆನ್‌ಲೈನ್ ಸೇರಿದಂತೆ ಎಲ್ಲಾ ರೀತಿಯ ಜೂಜಾಟ(Online Gaming Ban)ವನ್ನು ನಿಷೇಧ ಮಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ ಜೂಜಾಟದಲ್ಲಿ ಭಾಗಿಯಾದವರಿಗೆ ವಿಧಿಸುವ ಶಿಕ್ಷೆ ಹಾಗೂ ದಂಡದ ಪ್ರಮಾಣ ಹೆಚ್ಚಳ ಮಾಡುತ್ತಿದೆ. ಜೂಜು ಕೇಂದ್ರಕ್ಕೆ ಕಟ್ಟಡ ಬಾಡಿಗೆ ನೀಡುವುದು, ಜೂಜು ಕೇಂದ್ರದ ಮೇಲ್ವಿಚಾರಣೆ, ಜೂಜಾಟಕ್ಕೆ ಸಾಲ ನೀಡುವುದು ಹಾಗೂ ಜೂಜು ಕೇಂದ್ರ ತೆರೆಯುವರಿಗೆ 3 ವರ್ಷದ ವರೆಗೆ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಯಾವುದೇ ರೀತಿಯ ಜೂಜಾಟದಲ್ಲಿ ತೊಡಗಿರುವ ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಇದಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಜೂಜು ಆಡುವರಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಜೂಜಾಟದ ಉದ್ದೇಶಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಸೇರಿರುವ ಅಪರಾಧಕ್ಕೆ 6 ತಿಂಗಳ ಶಿಕ್ಷೆ ವಿಧಿಸುವ ಪ್ರಸ್ತಾಪ ಹೊಂದಲಾಗಿದೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.