ಗಂಧದ ಗುಡಿ ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಅಕ್ಟೋಬರ್ 21- ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆ ಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತ ಪಡಿಸಿದರು.
ಬೆಂಗಳೂರು: ಅಕ್ಟೋಬರ್ 21- ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆ ಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತ ಪಡಿಸಿದರು.
ಅವರು ಇಂದು ಪುನೀತ್ ರಾಜ್ ಕುಮಾರ್ ಅವರ ' ಗಂಧದ ಗುಡಿ ' ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರ ದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ ಈ ಸಿನೆಮಾ ಅತ್ಯಂತ ಪ್ರಸ್ತುತವಾಗಿದೆ. ನಿಸರ್ಗವನ್ನು ಮುಂದಿನ ಜನಾಂಗಕ್ಕೆ ಬಿಟ್ಟು ಹೋಗುವ ಅವಶ್ಯಕತೆ ಇದೆ. ಇಲ್ಲವಾದರೆ ಮುಂದಿನ ಜನಾಂಗದ ಭವಿಷ್ಯದಲ್ಲಿ ಕಳ್ಳತನ ಮಾಡಿದಂತೆ ಎಂದು ಅಭಿಪ್ರಾಯ ಪಟ್ಟರು.
ಇದನ್ನೂ ಓದಿ : Narendra Modi : ಕೇದಾರನಾಥ ದರ್ಶನಕ್ಕೆ ವಿಶೇಷ ಉಡುಪು ಧರಿಸಿದ ಪ್ರಧಾನಿ ಮೋದಿ!
Anything precious is very little) ಎಂದರು.ಡ್ರಿಪ್‍ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್, ಡೆಂಗ್ಯೂ ರೋಗಿ ಸಾವು..!
ಅಪ್ಪು ನೆನಪನ್ನು ಇಷ್ಟು ವಿಜೃಂಭಣೆಯಿಂದ ಆಯೋಜಿಸಿರುವ ಡಾ. ರಾಜ್ ಕುಮಾರ್ ಕುಟುಂಬದ ಶ್ರೀಮಂತಿಕೆಯನ್ನು ಕೊಂಡಾಡಿದ ಮುಖ್ಯಮಂತ್ರಿಗಳು ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಅಭಿನಂದಿಸಿದರು
ಇದೇ ನವೆಂಬರ್ 1 ರಂದು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಅಭಿಮಾನಿಗಳು, ನಾಡಿನ ಜನತೆ ಕಾರ್ಯಕ್ರಮದಲ್ಲಿ ಭಾಗ ವಹಿಸುವಂತೆ ಆಹ್ವಾನ ನೀಡಿದರು.
ಅಪ್ಪು ಮೇಲಿನ ಅಭಿಮಾನದ ಕುರಿತು ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು ತಮ್ಮ ಔರಾದ್ ಪ್ರವಾಸ ಸಂದರ್ಭದಲ್ಲಿ ಯುವಕರು ಅಪ್ಪು ಭಾವಚಿತ್ರದೊಂದಿಗೆ ಬಂದು ತಮ್ಮೊಡನೆ ಚಿತ್ರ ತೆಗೆಸಿಕೊಳ್ಳಲು ಮುಂದಾಗಿದ್ದನ್ನು ಸ್ಮರಿಸಿದರು.
ನಟ ಶಿವರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್, ಸಚಿವರಾದ ಮುರುಗೇಶ್ ನಿರಾಣಿ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೆ.ಸಿ. ನಾರಾಯಣಗೌಡ, ಆನಂದ್ ಸಿಂಗ್, ಶಾಸಕ ರಾಜೂಗೌಡ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.