ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಸೆಪ್ಟೆಂಬರ್ 8 ಮತ್ತು 9 ರಂದು 1000 ಹೆಚ್ಚುವರಿ ಬಸ್‌ಗಳನ್ನು ಓಡಿಸುವುದಾಗಿ ಘೋಷಿಸಿದೆ. ಮುಂಬರುವ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜನರು ಹೆಚ್ಚಾಗಿ ತಮ್ಮ ಊರುಗಳಿಗೆ ತೆರಳುತ್ತಾರೆ. ಕೊರೊನಾ 3ನೇ ಅಲೆ(Corona 3rd Wave)ಯ ಭೀತಿ ಇರುವುದರಿಂದ ಹಬ್ಬದ ಸಮಯದಲ್ಲಿ ಹೆಚ್ಚಿನ ಜನದಟ್ಟಣೆ ತಡೆಯುವ ಉದ್ದೇಶದಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಕೆಎಸ್‌ಆರ್‌ಟಿಸಿ(KSRTC), ಹಬ್ಬದ ಪ್ರಯುಕ್ತ ಬೇರೆ-ಬೇರೆ ಸ್ಥಳಗಳಿಗೆ ಪ್ರಯಾಣಿಸುವ ಜನರು ಹೆಚ್ಚುವರಿ ಬಸ್‌ ಸೇವೆ(Special Bus Service)ಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ ಅಥವಾ ಪಿಕ್ ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ಸೂಚಿಸಲಾಗಿದೆ.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ   


ಪ್ರಯಾಣಿಕರು  ksrtc.karnataka.gov.in  ವೆಬ್‌ಸೈಟ್‌ಗೆ ಲಾಗಿನ್ ಆಗಿ ತಮ್ಮ ಟಿಕೆಟ್‌ಗಳನ್ನು ಮುಂಗಡವಾಗಿ ಬುಕ್ ಮಾಡಬಹುದು. ರಾಜ್ಯಾದ್ಯಂತ ಮತ್ತು ಅಂತರರಾಜ್ಯದಲ್ಲಿರುವ 685 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದು ಎಂದು ಪ್ರಕಟಣೆಯಲ್ಲಿ KSRTC ತಿಳಿಸಿದೆ. 4 ಅಥವಾ ಅದಕ್ಕಿಂತ ಹೆಚ್ಚಿನ ಪ್ರಯಾಣಿಕರಿಗೆ ಟಿಕೆಟ್ ಬುಕ್ ಮಾಡಿದರೆ ಶೇ.5 ರಷ್ಟು ರಿಯಾಯಿತಿ ಮತ್ತು ರಿಟರ್ನ್ ಟಿಕೆಟ್‌ಗಳನ್ನು ಬುಕ್ ಮಾಡಿದರೆ ಶೇ.10 ರಿಯಾಯಿತಿ ಪ್ರಯಾಣಿಕರಿಗೆ ಸಿಗಲಿದೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಬೇಡಿಕೆಗೆ ಅನುಗುಣವಾಗಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ತಿಳಿಸಿದೆ.


ಬೆಂಗಳೂರಿನ(Bengaluru) ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ,  ಕುಂದಾಪುರ, ಗೋಕರ್ಣ, ಯಾದಗಿರಿ, ಬೀದರ್, ತಿರುಪತಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ರಾಯಚೂರು , ಶಿರಸಿ, ಬಳ್ಳಾರಿ, ಕೊಪ್ಪಳ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚಾರ ಸೇವೆ ಇರಲಿದೆ. ಮೈಸೂರು ಬಸ್ ನಿಲ್ದಾಣದಿಂದ ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಬಸ್‌ಗಳು ಸಂಚರಿಸಲಿವೆ.


ಇದನ್ನೂ ಓದಿ: ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ


ಇದಲ್ಲದೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ ಅಥವಾ ತೆಲಂಗಾಣ ಕಡೆಗೆ ವಿಶೇಷ ಬಸ್ ವ್ಯವಸ್ಥೆ ಇರಲಿದೆ. ಮಧುರೆ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಂಬತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಮಧ್ಯೆ ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸಲಹೆ ನೀಡಿದೆ. ಕೊರೊನಾ 3ನೇ ಅಲೆ ತಪ್ಪಿಸುವ ದೃಷ್ಟಿಯಿಂದ ತುರ್ತು ಇಲ್ಲದಿದ್ದರೆ ನೆರೆಯ ರಾಜ್ಯಗಳಿಗೆ ಪ್ರಯಾಣಿಸದಂತೆ ಸೂಚಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.