CM Siddaramayya : ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ  ಸಿಎಂ ಸಿದ್ದರಾಮಯ್ಯ ಅವರಿಗೆ ಅರಸೀಕೆರೆಯ ವಿದ್ಯಾರ್ಥಿನಿಯೊಬ್ಬಳು ಬಂದು ಸಿಎಂ ಕೊರಳಿಗೆ ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾಳೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ : 4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿ 


ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ " ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು " ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ. 


ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಸಿಎಂ ಕಡೆಗೆ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. 



‘’ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ.  ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’  ಎಂದು ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು ಎಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಕುರಿತಂತೆ ಪೋಸ್ಟ್ ಹಾಕಿಕೊಂಡಿದ್ದಾರೆ. 


ಇದನ್ನು ಓದಿ : Megha shetty : ಕೈವ ಚಿತ್ರದ ಲುಕ್ ರಿಮೇಕ್ ಮಾಡಿದ ನಟಿ, ಫೋಟೋಸ್ ಇಲ್ಲಿವೆ 


ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪ ಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು' ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.