ಬೆಂಗಳೂರು: ಎಲ್ಲರನ್ನ ಒಳಗೊಳ್ಳುವ ಸಮಾಜದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಬಸವಣ್ಣನವರ ಬೋಧನೆಗಳು ಇಂದಿಗೂ ಪ್ರಸ್ತುತ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ ಹೇಳಿದರು. 


COMMERCIAL BREAK
SCROLL TO CONTINUE READING

ಇಂದು ಲಂಡನ್‌ ನಗರದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು, ಲ್ಯಾಂಬೆತ್‌ ಬಸವೇಶ್ವರ ಫೌಂಡೇಶನ್ನಿನ ಐತಿಹಾಸಿಕ ಪ್ರಕಲ್ಪವಾದ ಲಂಡನ್‌ನಲ್ಲಿ ಶ್ರೀ ಬಸವೇಶ್ವರರ ಪ್ರತಿಮೆಯ ಸ್ಥಳಕ್ಕೆ ಆಗಮಿಸಿ ಗೌರವ ಸಲ್ಲಿಸುವ ಅವಕಾಶ ದೊರೆತಿರುವುದು ಬಹಳ ಸಂತಸದ ವಿಷಯ.


ಇದನ್ನೂ ಓದಿ: Contaminated Water: ಕಲುಷಿತ ನೀರು ಸೇವನೆ  : 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ!


ದಿವಂಗತ ಅನಂತಕುಮಾರ್‌ ಅವರು ಪ್ರತಿಮೆಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಬಸವೇಶ್ವರರು ತಮ್ಮ ಬೋಧನೆಗಳ ಮೂಲಕ ಇಡೀ ಜಗತ್ತಿಗೆ ಎಲ್ಲರನ್ನೂ ಒಳಗೊಳ್ಳುವ ಪರಿಕಲ್ಪನೆಯನ್ನು ನೀಡಿದವರು. ಅವರ ಬೋಧನೆಗಳೂ ಇಂದಿಗೂ ಪ್ರಸ್ತುತ ಎಂದು ಹೇಳಿದರು. 


ಇದನ್ನೂ ಓದಿ: ʼಗ್ಯಾರಂಟಿʼಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ನೂತನ ಸಚಿವರಿಗೆ ಸಿಎಂ ಟಾರ್ಗೆಟ್


ಬ್ರಿಟೀಷ್‌ ಭಾರತೀಯ ಮತ್ತು ಕನ್ನಡ ಸಮುದಾಯದ ಸದಸ್ಯರನ್ನ ಒಟ್ಟುಗೂಡಿಸಿದ ಈ ಕಾರ್ಯಕ್ರಮದಲ್ಲಿ ದಿ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್‌ನ ಅಧ್ಯಕ್ಷ ಡಾ. ನೀರಜ್ ಪಾಟೀಲ್ ಮತ್ತು ವಿಜೇತಾ ಅನಂತಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ