ಗ್ಯಾಸ್ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳ ದುರ್ಮರಣ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ರಾತ್ರಿ ಊಟ ಮುಗಿಸಿಕೊಂಡು ಸಣ್ಣ ಕೋಣೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದ್ದು ಈ ದುರ್ಘಟನೆಯಲ್ಲಿ 9 ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದರು.
ಹುಬ್ಬಳ್ಳಿ: ನಗರದ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಮಾಲಧಾರಿಗಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಅಯ್ಯಪ್ಪ ಮಾಲಾಧಾರಿಗಳನ್ನು ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಮತ್ತು ಸಂಜಯ ಸವದತ್ತಿ (20) ಎಂದು ಗುರುತಿಸಲಾಗಿದೆ. ಮೃತ ಸಂಜಯ ಸವದತ್ತಿ ಬಿಎ ಪದವೀಧರರಾಗಿದ್ದು ದೇಶ ಸೇವೆ ಮಾಡುವ ಕನಸು ಕಂಡಿದ್ದರು. ಇದೇ ಮೊದಲ ಬಾರಿಗೆ ಮಾಲೆ ಧರಿಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಶಕ್ತಿ ಯೋಜನೆಯಿಂದ ಮಲೆ ಮಹದೇಶ್ವರನಿಗೆ ಹರಿದು ಬಂತು ಬಂಪರ್ ಆದಾಯ.. !
ಘಟನೆಯಲ್ಲಿ ಗಾಯಗೊಂಡಿರುವ ಇನ್ನುಳಿದ ಏಳು ಮಂದಿಯನ್ನು ರಾಜು ಹರ್ಲಾಪುರ(21), ವಿನಾಯಕ ಬಾತಕೇರ(12), ಪ್ರಕಾಶ ಬಾರಕೇರ(42), ಮಂಜು ತೋರದ(22), ಪ್ರವೀಣ ಚಲವಾದಿ(24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ(29) ಎಂದು ಗುರುತಿಸಲಾಗಿದ್ದು, ಇವರ ಸ್ಥಿತಿಯೂ ಚಿಂತಾಜನಕವಾಗಿದೆ ಎನ್ನಲಾಗಿದೆ.
ಇನ್ನೂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಾಲಾಧಾರಿಗಳ ಪ್ರಾಣ ಉಳಿಸಲು ನಾನಾ ರೀತಿಯ ಕಸರತ್ತುಗಳನ್ನು ನಡೆಸಲಾಗಿದೆ. ಇವರೆಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಬೆಂಗಳೂರಿನಿಂದ ಮೂವರು ವೈದ್ಯಾಧಿಕಾರಿಗಳನ್ನು ಕರೆಸಿಕೊಂಡು ಚಿಕಿತ್ಸೆ ಕೊಡಿಸಿದ್ದರು. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ- ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್.ಅಶೋಕ
ಏನಿದು ಘಟನೆ:
ರಾತ್ರಿ ಊಟ ಮುಗಿಸಿಕೊಂಡು ಸಣ್ಣ ಕೋಣೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿದ್ದು ಈ ದುರ್ಘಟನೆಯಲ್ಲಿ 9 ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ:
ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಿಲೆಂಡರ್ ಸ್ಫೋಟದಲ್ಲಿ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ
ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರ ಬದುಕಿಸಲು ಪ್ರಯತ್ನ ಮಾಡಿದ್ವಿ. ನಾಲ್ವರು ಎಕ್ಸ್ಪೆರ್ಟ್ ವೈದ್ಯರನ್ನ ಕರೆಯಿಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದಾಗ್ಯೂ, ತೀವ್ರವಾಗಿ ಸುಟ್ಟಿದ್ದರಿಂದ ಚಿಕಿತ್ಸೆ ಫಲಕಾರಿ ಆಗದೆ ಇಬ್ಬರು ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎಸುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನು ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.