ಗ್ಯಾಸ್ ಗೀಜರ್​ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ತಾಯಿ, ಮಗಳು ಸಾವು

ಭಾನುವಾರ ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು ಕರೆದುಕೊಂಡು ತಾಯಿ ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

Written by - Zee Kannada News Desk | Last Updated : Jan 17, 2022, 01:38 PM IST
  • ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ತಾಯಿ ಮತ್ತು ಮಗಳು ಉಸಿರುಗಟ್ಟಿ ಸಾವು
  • ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಈ ದುರಂತ ಘಟನೆ ಸಂಭವಿಸಿದೆ
  • ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಗ್ಯಾಸ್ ಗೀಜರ್​ನಿಂದ ಅನಿಲ ಸೋರಿಕೆ: ಉಸಿರುಗಟ್ಟಿ ತಾಯಿ, ಮಗಳು ಸಾವು title=
ಉಸಿರುಗಟ್ಟಿ ತಾಯಿ, ಮಗಳು ಸಾವನ್ನಪ್ಪಿದ್ದಾರೆ

ಬೆಂಗಳೂರು: ಗ್ಯಾಸ್ ಗೀಜರ್‌ ನಿಂದ ಅನಿಲ ಸೋರಿಕೆ(Gas Geyser Leakage)ಯಾಗಿ ಅನಾಹುತ ಸಂಭವಿಸಿದ್ದು, ತಾಯಿ ಮತ್ತು ಮಗಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ನಾನಕ್ಕೆಂದು ತೆರಳಿದ್ದ ತಾಯಿ-ಮಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷದ ತಾಯಿ ಮಂಗಳ ಮತ್ತು 7 ವರ್ಷದ ಗೌತಮಿ ಮೃತಪಟ್ಟವರು.

ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ(Chikkabanavara)ದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಗ್ಯಾಸ್ ಗೀಜರ್‌ ಬಳಸಿ ಸ್ನಾನ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮಾಲೀಕರಾದ ಗಾಯಿತ್ರಿ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಡಾ.ಸಿದ್ಧಲಿಂಗಯ್ಯನವರ ಬದುಕು-ಬರಹ ವಿಚಾರಸಂಕಿರಣ : ಪ್ರಬಂಧಗಳಿಗೆ ಆಹ್ವಾನ

ರಾಮನಗರ(Ramanagar) ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು. ಭಾನುವಾರ ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು ಕರೆದುಕೊಂಡು ತಾಯಿ ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿದ್ದರು. ಈ ವೇಳೆ ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಆನ್ ಮಾಡಲು ಹೋದಾಗ ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆ ಉಂಟಾಗಿದೆ. ಪರಿಣಾಮ ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆ(Soladevanahalli Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಅನಧಿಕೃತ ಜಂಗಲ್ ಲಾಡ್ಜ್ ಪ್ರಕರಣ: ಕೋರ್ಟ್ ಸಮಯ ಹಾಳು ಮಾಡಿದಕ್ಕೆ ಅರ್ಜಿದಾರರಿಗೆ ₹50 ಸಾವಿರ ದಂಡ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News