ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.


COMMERCIAL BREAK
SCROLL TO CONTINUE READING

ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿ:  RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ! ಮತ್ತೆ ಕ್ಯಾಪ್ಟನ್ ಆಗ್ತಾರಾ ಕಿಂಗ್?


ಬಿಜೆಪಿ ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು.  ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.


ಇದನ್ನೂ ಓದಿ: ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ


ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ