ರಾಜ್ಯಸಭೆ ಚುನಾವಣೆ ಲಿಂಗಾಯತರಿಗೆ ಒಂದು ಸೀಟು ಬಿಟ್ಟುಕೊಡಿ: ಎಐಸಿಸಿ ಅಧ್ಯಕ್ಷರಿಗೆ ಶಾಮನೂರು ಪತ್ರ
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರು: ವೀರಶೈವ -ಲಿಂಗಾಯತ ಸಮುದಾಯಕ್ಕೆ ರಾಜ್ಯಸಭೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 3 ಸ್ಥಾನಗಳ ಲಭಿಸಬಹುದು. ಅದರಲ್ಲಿ 1 ಸ್ಥಾನವನ್ನು ವೀರಶೈವರಿಗೆ ಹಂಚಿಕೆ ಮಾಡಿ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಇತಿಹಾಸ ನೆನಪಿಸಿದ ಶಾಮನೂರು: ಸ್ವಾತಂತ್ರ್ಯ ಪೂರ್ವದಲ್ಲೂ, ನಂತರವೂ ಕಾಂಗ್ರೆಸ್ ಪಕ್ಷವನ್ನು ವೀರಶೈವ-ಲಿಂಗಾಯತರು ಬೆಂಬಲಿಸಿರುವುದು ಅನೇಕ ಘಟನೆಗಳಿಂದ ಕಂಡುಬರುತ್ತದೆ. ಸ್ವಾತಂತ್ರ್ಯ ನಂತರ ಚುನಾವಣೆಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗಿನ ಚುನಾವಣಾ ಅಂಕಿ-ಅಂಶಗಳನ್ನು ಪರಮರ್ಶಿಸುವುದಾದರೆ ವೀರಶೈವ-ಲಿಂಗಾಯತರು 1999ರವರೆಗೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರಾಗಿದ್ದರು. ಇದಕ್ಕೆ ಹಲವಾರು ಕಾರಣಗಳಿವೆ. ಎಸ್.ನಿಜಲಿಂಗಪ್ಪ, ಬಿ.ಡಿ.ಜತ್ತಿ, ಎಸ್.ಆರ್.ಕಂಠಿ, ವಿರೇಂದ್ರ ಪಾಟೀಲ್ ಮುಂತಾದ ನಮ್ಮ ಸಮಾಜದ ನಾಯಕರುಗಳು, ಮುತ್ಸದ್ದಿಗಳು ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ನಮ್ಮ ಸಮಾಜದ ಪ್ರತಿನಿಧಿಗಳಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದರಲ್ಲಿ ಎರಡು ಮಾತಿಲ್ಲವೆಂದು ಸ್ಮರಿಸಿದ್ದಾರೆ.
ಇದನ್ನೂ ಓದಿ: ಬಳ್ಳಾರಿ ಶಾಸಕ ಭರತ್ ನಾರಾ ರೆಡ್ಡಿ ಮೇಲೆ ED ರೇಡ್
ಆದರೆ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ - ಲಿಂಗಾಯತರ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಕಡೆಗಣಿಸುತ್ತಾ ಬಂದಿದ್ದರ ಫಲವಾಗಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಿಲ್ಲ. ಈಗಲೂ ಕಾಲಮಿಂಚಿಲ್ಲ ಇನ್ನಾದರೂ ನಮ್ಮ ಸಮುದಾಯದವರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ನಾಯಕತ್ವ ಕಲ್ಪಿಸುವ ಮೂಲಕ ಪ್ರಾತಿನಿಧ್ಯ ನೀಡುತ್ತಿರೆಂದು ನಂಬಿರುತ್ತೇವೆಂದು ಉಲ್ಲೇಖಿಸಿದ್ದಾರೆ.
ನಮ್ಮ ರಾಜ್ಯದವರೇ ಆದ ತಮಗೆ ಪ್ರತ್ಯೇಕವಾಗಿ ನಮ್ಮ ಸಮಾಜದ ಬಗ್ಗೆ ಹೇಳುವಂತದ್ದು ಏನೂ ಇಲ್ಲ. ಕಳೆದ 7 ದಶಕಗಳಿಂದ ನೀವು ಹತ್ತಿರದಿಂದ ನಮ್ಮ ಸಮಾಜವನ್ನು ಬಲ್ಲವರಾಗಿದ್ದೀರಿ. ಇದನ್ನೆಲ್ಲವನ್ನು ಸರಿಪಡಿಸುವ ಶಕ್ತಿ ತಮ್ಮಲ್ಲಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆ ನೀಡವುದರ ಮುಖಾಂತರ ಕಾಂಗ್ರೆಸ್ ಪಕ್ಷವು ತನ್ನ ಗತ ವೈಭವವನ್ನು ಗಳಿಸುವಂತಾಗಲೀ ಎಂದು ಆಶಿಸುತ್ತೇವೆ ಎಂದು ಕೋರಿದ್ದಾರೆ.
ಇದನ್ನೂ ಓದಿ: ವಿವಿಧ ಬೇಡಿಕೆಗಳಿಗಾಗಿ ರೈತರಿಂದ ದೆಹಲಿ ಚಲೋ
ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕೋರುತ್ತೇವೆ. ಅಲ್ಲದೇ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದ ಜನಸಂಖ್ಯೆಗ ನುಗುಣವಾಗಿ ನಮ್ಮ ಸಮಾಜದವರಿಗೆ ಆದ್ಯತೆ ನೀಡುವ ಮೂಲಕ ಹಿಂದೆ ಆಗಿರುವಂತಹ ನ್ಯೂನತೆಗಳನ್ನು ಸರಿಪಡಿಸಿಕೊಂಡು ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಮೂಲಕ ತಮ್ಮ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವು ಭವ್ಯ ಭಾರತ ನಿರ್ಮಾಣ ಮಾಡುವಂತಾಗಲು ಕಾಂಗ್ರೆಸ್ ಪಕ್ಷದಲ್ಲಿ ಮತ್ತು ಚುನಾವಣೆಗಳಲ್ಲಿ ನಮ್ಮ ಸಮಾಜಕ್ಕೆ ಆದ್ಯತೆಯ ಮೇರೆಗೆ ಸ್ಥಾನಮಾನ ನೀಡುವಂತೆ ಅವರು ಕೋರಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.