ಬೆಂಗಳೂರು ಫೆ 21: ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸೌಂಡ್ ಮಾಡಲು ಬರ್ತಿದ್ದಾನೆ ʻಸೋಮುʼ.. ಮಾ.15ಕ್ಕೆ ಸೂರಿ ಶಿಷ್ಯನ ಚೊಚ್ಚಲ ಪ್ರಯತ್ನ ತೆರೆಗೆ
ವಿಧಾನ ಪರಿಷತ್’ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.
ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.
ಇದನ್ನೂ ಓದಿ: Cricketer Retirement: ಕೊನೆಯಾಯ್ತು ಸುದೀರ್ಘ ಪಯಣ… ಕ್ರಿಕೆಟ್ ಜಗತ್ತಿಗೆ ದಿಢೀರ್ ನಿವೃತ್ತಿ ಘೋಷಿಸಿದ ಕೊಹ್ಲಿ!
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ. ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.