ಅರಿಶಿಣದ ಪರಿಸರಸ್ನೇಹಿ ಗಣೇಶ ಮೂರ್ತಿ ಬಳಸಿ: ಸಿಎಂ ಬಸವರಾಜ್ ಬೊಮ್ಮಾಯಿ

ಕೊರೊನಾ ಸಾಂಕ್ರಮಿಕ ರೋಗದ ಭೀತಿಯ ನಡುವೆ ಈ ಬಾರಿಯ ಗಣೇಶೋತ್ಸವ ಪರಿಸರಸ್ನೇಹಿಯಾಗಿರಲಿ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Written by - Puttaraj K Alur | Last Updated : Sep 9, 2021, 03:52 PM IST
  • ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಹಾಗೂ ವಿಷಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರಿಸಿದ ಗಣೇಶ ಮೂರ್ತಿ ಬಳಸಬಾರದು
  • ಪಿಒಪಿ ಹಾಗೂ ಬಣ್ಣ ಲೇಪಿತ ಗಣೇಶ ಮೂರ್ತಿ ಬದಲು ಅರಿಶಿಣದ, ಮಣ್ಣಿನ ಗಣಪತಿ ತಯಾರಿಸುವಂತೆ ಜನರಿಗೆ ಸಲಹೆ
  • ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರಸ್ನೇಹಿ ಗಣೇಶೊತ್ಸವ ಆಚರಣೆಗೆ ಜಾಗೃತಿ
ಅರಿಶಿಣದ ಪರಿಸರಸ್ನೇಹಿ ಗಣೇಶ ಮೂರ್ತಿ ಬಳಸಿ: ಸಿಎಂ ಬಸವರಾಜ್ ಬೊಮ್ಮಾಯಿ title=
ಪರಿಸರಸ್ನೇಹಿ ಗಣೇಶೊತ್ಸವ ಆಚರಣೆಗೆ ಜಾಗೃತಿ (Photo Courtesy: @Zee News)

ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ(Ganesh Festival 2021) ಆಚರಿಸಲು ರಾಜ್ಯ ಸರ್ಕಾರ ಈಗಾಗಲೇ ಷರತ್ತುಬದ್ಧ ಅನುಮತಿ ನೀಡಿದೆ. ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆ ಮೆರವಣಿಗೆ ಸೇರಿದಂತೆ ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಗಣೇಶ ಹಬ್ಬಕ್ಕೆ ಸರ್ಕಾರ ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಧ್ಯೆ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ.

‘ಅರಿಶಿಣದಿಂದ ತಯಾರಿಸಿರುವ ಪರಿಸರಸ್ನೇಹಿ ಗಣೇಶನ ಮೂರ್ತಿ(Eco Friendly Ganesha)ಯನ್ನೇ ಮನೆಯಲ್ಲಿ ಪೂಜೆಗೆ ಬಳಸೋಣ’ವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ರಾಜ್ಯದ ಜನರಿಗೆ ಸಲಹೆ ನೀಡಿದ್ದಾರೆ. ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ಕುರಿತು ಸಿಎಂ ಮಾತನಾಡಿರುವ ವಿಡಿಯೋವನ್ನು ಬಿಜೆಪಿ ಕರ್ನಾಟಕ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ: ಬಿ.ಸಿ.ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ!

'ಕೊರೊನಾ ಸಾಂಕ್ರಮಿಕ ರೋಗದ ಭೀತಿಯ ನಡುವೆ ಈ ಬಾರಿಯ ಗಣೇಶೋತ್ಸವ ಪರಿಸರಸ್ನೇಹಿಯಾಗಿರಲಿ. ನಾಗರಿಕರ ಅನುಕೂಲಕ್ಕಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ 10 ಲಕ್ಷ ಅರಿಶಿಣದ ಗಣೇಶ ಮೂರ್ತಿ(Turmeric Ganesha)ಗಳನ್ನು ತಯಾರಿಸುತ್ತಿದ್ದು, ಅದರ ಸದುಪಯೋಗ ಪಡೆಯೋಣ’ವೆಂದು ಸಿಎಂ ಬೊಮ್ಮಾಯಿಯವರು ಕರೆ ನೀಡಿದ್ದಾರೆ.

ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯಕ್ಕೂ 3ನೇ ಅಲೆ(Coroan 3rd Wave)ಯ ಭೀತಿ ಎದುರಾಗಿದೆ. ಹೀಗಾಗಿ ಈ ಬಾರಿ ‘ಪರಿಸರ ಸ್ನೇಹಿ ಜೊತೆಗೆ ಆರೋಗ್ಯ ಸ್ನೇಹಿ’ ಗಣೇಶೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಹಬ್ಬದ ದಿನ ಜನದಟ್ಟಣೆ ತಡೆಯುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಳ್ಳುತ್ತಿದ್ದು, ಅರಿಶಿಣದ ಗಣೇಶ ಮೂರ್ತಿಗಳನ್ನು ಸಿದ್ಧಪಡಿಸುತ್ತಿದೆ.

ಇದನ್ನೂ ಓದಿ: Deadly Virus: ನಿಫಾ ವೈರಸ್ ವಕ್ಕರಿಸಿದರೆ ಪ್ರಾಣಕ್ಕೆ ಕುತ್ತು ಗ್ಯಾರಂಟಿ..!

ಪರಿಸರಸ್ನೇಹಿ ಗೌರಿ-ಗಣೇಶ ಹಬ್ಬದಲ್ಲಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಹಾಗೂ ವಿಷಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರಿಸಿದ ಗಣೇಶ ಮೂರ್ತಿಗಳನ್ನು ಬಳಸಬಾರದು ಎಂದು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಿಒಪಿ ಹಾಗೂ ಬಣ್ಣ ಲೇಪಿತ ಗಣೇಶ ಮೂರ್ತಿ ಬದಲು ಮಣ್ಣಿನ ಗಣಪತಿ(Turmeric Ganesha Idol)ತಯಾರಿಸುವಂತೆ ಪ್ರೋತ್ಸಾಹ ನೀಡುತ್ತಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವೈರಾಣು ನಿರೋಧಕ ಶಕ್ತಿ ಹೊಂದಿರುವ ಅರಿಶಿಣದ ಗಣೇಶ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ, ಪೂಜಿಸಿ ಅದನ್ನು ಮನೆಯಲ್ಲಿಯೇ ವಿಸರ್ಜಿ ಎಂದು ಸಲಹೆ ನೀಡಿದೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News