ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ನ್ಯಾಯಾಧಿಕರಣದಲ್ಲಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಹಿಂಪಡೆದಿದೆ.


COMMERCIAL BREAK
SCROLL TO CONTINUE READING

ಈ ಹಿಂದೆ, ಕರ್ನಾಟಕ ರಾಜ್ಯವು ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿ ಕರ್ನಾಟಕ ಮಹದಾಯಿ ಕೊಳ್ಳದಲ್ಲಿ ಕಾಮಗಾರಿ ನಡೆಸುತ್ತಿದೆ ಎಂದು ಆರೋಪಿಸಿ ಗೋವಾ ಸರ್ಕಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. 


ಇದನ್ನೂ ಓದಿ : ಮಹದಾಯಿ ವಿವಾದ : ಕರ್ನಾಟಕದ್ದು ದುರುದ್ದೇಶದ ಯೋಜನೆ ಎಂದ ಗೋವಾ


ಇದಕ್ಕೆ ಉತ್ತರವಾಗಿ, ರಾಜ್ಯಸರ್ಕಾರ ಮಹದಾಯಿ ನ್ಯಾಯಾಧಿಕರಣಕ್ಕೆ ಪ್ರಮಾಣ ಪತ್ರ ಸಲ್ಲಿಸುವ ಮೂಲಕ, ಗೋವಾ ಸರ್ಕಾರ ಮಾಡಿರುವ ನ್ಯಾಯಾಂಗ ನಿಂದನೆ ಆರೋಪ ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ಸರ್ಕಾರ ಯಾವತ್ತೂ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿತ್ತು.


ಅಲ್ಲದೆ, ಗೋವಾ ಸರ್ಕಾರ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕಾನೂನು ಬದ್ದವಾಗಿಲ್ಲ ಹಾಗೂ ನ್ಯಾಯಾಂಗ ನಿಂದನೆ ಅರ್ಜಿ ಕುರಿತು ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರ ನ್ಯಾಯಮಂಡಳಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರ್ಕಾರ ಪ್ರಮಾಣಪತ್ರದಲ್ಲಿ ವಾದಿಸಿತ್ತು.


ಇದನ್ನೂ ಓದಿ : ಮಹದಾಯಿ ವಿವಾದ : ನ್ಯಾಯಾಧಿಕರಣದ ಅವಧಿ ವಿಸ್ತರಣೆಗೆ ಒಪ್ಪಿಗೆ ನೀಡದಿರಲು ಸರ್ಕಾರ ನಿರ್ಧಾರ


ಈ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ ಗೋವಾ ವಕೀಲರು ಅರ್ಜಿಯನ್ನು ವಾಪಾಸ್‌ ಪಡೆಯುವುದಾಗಿ ಹೇಳಿದ್ದಾರೆ.