ಬೆಂಗಳೂರು: ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟೆ ಇವರು “ಉಚಿತ ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಲಕೋಟೆಯಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಏರ್ಪಡಿಸಲಾಗಿದ್ದು, ಭಾಗವಹಿಸುವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕನ್ನಡಿಗ ಕೆ.ಎಲ್.ರಾಹುಲ್ ಪಾಕ್ ಗೆ ಅಪಾಯಕಾರಿಯಾಗಲಿದ್ದಾರೆ ಎಂದ ಮ್ಯಾಥ್ಯೂ ಹೇಡನ್


ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು.ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಮೊಬೈಲ್ ನಂಬರ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.


ಇದನ್ನೂ ಓದಿ: ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ OnePlus Nord 2 5G...!


ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟಿ -587103, ದೂರವಾಣಿ ಸಂಖ್ಯೆ 08354-244028/ 244048 ಇಲ್ಲಿ ಸಂಪರ್ಕಿಸಬಹುದು ಎಂದು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.