ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆಯಿಂದ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ (ಜೂ.30) ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ ಮೇಲೆ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಇವೆಲ್ಲವುಗಳ ಜತೆಗೆ ಕಂದಾಯ ಇಲಾಖೆಯ ಕೆಲಸಗಳು ಕುಂಠಿತಗೊಳ್ಳಬಾರದು ಎಂದು ಹೇಳಿದರು.
ಸರಕಾರಕ್ಕೆ ಒಳ್ಳೆಯ ಹೆಸರು ತರುವುದು ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಅವಲಂಬಿಸಿರುತ್ತದೆ. ಆದ್ದರಿಂದ ಎಲ್ಲರೂ ಉತ್ತಮ ಆಡಳಿತ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.
ಜನಪರ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಅದರಲ್ಲೂ ಕಂದಾಯ ಇಲಾಖೆಯ ಪಾತ್ರ ಮಹತ್ವದ್ದು. ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಕೆಲಸ ಮಾಡಲು ಸರಕಾರಕ್ಕೆ ಸಹಕರಿಸಬೇಕು ಎಂದರು.
ಇದನ್ನೂ ಓದಿ: ಲಿಂಗಾಯತ ನಾಯಕತ್ವ ಹಾಗೂ BSY ಬೆಂಬಲಿಗರನ್ನು ಮುಗಿಸಿಹಾಕಲು ಸಂತೋಷ ಕೂಟ ಪಣ ತೊಟ್ಟಿದೆ: ಕಾಂಗ್ರೆಸ್
ಪ್ರತಿ ತಿಂಗಳು ಕಂದಾಯ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಆದ್ದರಿಂದ ಉತ್ತಮ ಆಡಳಿತ ನೀಡುವ ದಿಸೆಯಲ್ಲಿ ಎಲ್ಲರೂ ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಕಳೆದ ಸಾಲಿನ ಹಾಗೂ ಅದಕ್ಕಿಂತಲೂ ಮುಂಚಿನ ಸಾಲಿಗೆ ಸಂಬಂಧಿಸಿದಂತೆ ಕೋವಿಡ್, ಬರ ಸೇರಿದಂತೆ ವಿವಿಧ ಪ್ರಕೃತಿ ವಿಕೋಪ ಕಾರಣಗಳಿಗಾಗಿ ಬಿಡುಗಡೆ ಮಾಡಲಾಗಿರುವ ಅನುದಾನ ಬಳಕೆಗೆ ಕಾಲಮಿತಿ ನಿಗದಿಪಡಿಸಲಾಗುವುದು. ಅದಾದ ಬಳಿಕ ಹಿಂದಕ್ಜೆ ಪಡೆಯಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಮ್ಯೂಟೇಶನ್ ನೋಟಿಸ್ ಅವಧಿಯ ಪ್ರಕ್ರಿಯೆ ಸರಳಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಅವರು, ಒಟ್ಟಾರೆ ಪ್ರಕ್ರಿಯೆ ಸರಳಗೊಳಿಸಬೇಕು ಎಂದು ಅವರು ತಿಳಿಸಿದರು.
ಪ್ರಭಾರ ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು, ಪ್ರವಾಹ ಅಥವಾ ಇತರೆ ವಿಕೋಪ ಸಂದರ್ಭದಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ಮತ್ತು ಜೀವಹಾನಿಯಾದಾಗ ಸಂಬಂಧಿಸಿದ ಕುಟುಂಬಗಳಿಗೆ ಪರಿಹಾರ ನೀಡಲು ಸಾಕಷ್ಟು ಅನುದಾನ ಲಭ್ಯವಿದೆ ಎಂದು ವಿವರಿಸಿದರು.
ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಪ್ರಗತಿಯ ಕುರಿತು ಸಭೆಗೆ ಮಾಹಿತಿಯನ್ನು ನೀಡಿದರು.
ಇದನ್ನೂ ಓದಿ: ಆರೆಸೆಸ್ಸ್ ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರು..! ಸ್ಪಷ್ಟನೆ ನೀಡಿದ ನಿರ್ದೇಶಕರು
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರಾದ ಡಾ.ಬಿ.ಆರ್.ಮಮತಾ, ಭೂಮಾಪನ ಹಾಗೂ ಭೂ ದಾಖಲೆಗಳ ಆಯುಕ್ತರಾದ ಸಿ.ಎನ್.ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಮತ್ತು ವಿಜಯಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರುಗಳು, ಜಿಲ್ಲಾ ನೋಂದಣಾಧಿಕಾರಿಗಳು, ತಹಶೀಲ್ದಾರರು, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ