ಗುಡ್ ನ್ಯೂಸ್ : ಶೀಘ್ರವೇ ಈ ಇಲಾಖೆಯಲ್ಲಿ ಖಾಲಿ ಇರುವ 16,000 ಹುದ್ದೆಗಳಿಗೆ ನೇಮಕಾತಿ

ರಾಜ್ಯದಲ್ಲಿ ಖಾಲಿಯಿರುವ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದಾರೆ.  

Last Updated : Nov 23, 2020, 08:03 AM IST
  • ರಾಜ್ಯದಲ್ಲಿ ಖಾಲಿಯಿರುವ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ
  • ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭ
ಗುಡ್ ನ್ಯೂಸ್ : ಶೀಘ್ರವೇ ಈ ಇಲಾಖೆಯಲ್ಲಿ ಖಾಲಿ ಇರುವ 16,000 ಹುದ್ದೆಗಳಿಗೆ ನೇಮಕಾತಿ title=

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಉಡುಗೊರೆ ನೀಡಿದ್ದು ಶೀಘ್ರದಲ್ಲೇ ಖಾಲಿ ಇರುವ 16,000 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದ್ದಾರೆ.

RITESನಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಪೂರ್ಣ ವಿವರ

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಖಾಲಿಯಿರುವ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಆರ್ಥಿಕ ಸಮಸ್ಯೆಯೇ? ಹಾಗಿದ್ರೆ ಪ್ರತಿ ಸೋಮವಾರ ಈ ಕೆಲಸ ಮಾಡಿ

ಈಗಾಗಲೇ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಹೊಸದಾಗಿ 16 ಸಾವಿರ ಸಿಬ್ಬಂದಿಯನ್ನು ನೇಮಿಸಲಾಗುವುದು. ಅಲ್ಲದೆ ಪೊಲೀಸ್ (Police) ಇಲಾಖೆಯನ್ನು ಮತ್ತಷ್ಟು ಸದೃಢಗೊಳಿಸಲು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರಲ್ಲದೆ ನಾವು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಹತ್ತಿರವಾಗಬೇಕು ಎಂದು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕರೆ ನೀಡಿದರು.

Trending News