2nd PUC Result 2021 : ದ್ವಿತೀಯ PU ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜು. 20ರೊಳಗೆ PU ಫಲಿತಾಂಶ ಪ್ರಕಟ
ಜು. 20ರೊಳಗೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಫಲಿತಾಂಶ ಘೋಷಣೆಯಾಗಲಿದೆ. ಇನ್ನು, ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 35 ಅಂಕದ ಜೊತೆಗೆ ಶೇ. 5ರಷ್ಟು ಗ್ರೇಸ್ ಅಂಕಗಳನ್ನ ನೀಡಬೇಕು ಎಂದು ಉಚ್ಚ ನ್ಯಾಯಾಲಯಕ್ಕೆ ಸರ್ಕಾರ ಸ್ಪಷ್ಟಪಡಿಸಿದೆ.
ಬೆಂಗಳೂರು : ಇದೆ ತಿಂಗಳ 20ರ(ಜುಲೈ 20) ಒಳಗೆ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸುವುದಾಗಿ ಪಿಯು ಬೋರ್ಡ್ ತಿಳಿಸಿದೆ.
ಕಳೆದ ವರ್ಷ ಕೊರೋನಾ ಕಾರಣದಿಂದ ದ್ವಿತೀಯ ಪಿಯು(2nd PUC) ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡಿದೆ. ಈಗ ನಿರೀಕ್ಷೆಯಂತೆ ಪಿಯು ರಿಪೇಟರ್ಸ್ ವಿದ್ಯಾರ್ಥಿಗಳಿಗೆ ಇದು ಸಿಹಿ ಸುದ್ದಿಯಾಗಲಿದೆ. ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಸರ್ಕಾರ ತಿಳಿಸಿದೆ.
ಇದನ್ನೂ ಓದಿ : Heavy Rainfall in Karnataka : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ
ಜು. 20ರೊಳಗೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಫಲಿತಾಂಶ(PUC Result 2021) ಘೋಷಣೆಯಾಗಲಿದೆ. ಇನ್ನು, ದ್ವಿತೀಯ ಪಿಯು ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 35 ಅಂಕದ ಜೊತೆಗೆ ಶೇ. 5ರಷ್ಟು ಗ್ರೇಸ್ ಅಂಕಗಳನ್ನ ನೀಡಬೇಕು ಎಂದು ಉಚ್ಚ ನ್ಯಾಯಾಲಯಕ್ಕೆ ಸರ್ಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ : Bengaluru Gang Rape Case: 12 ಮಂದಿಯ ಬಂಧನ, ಶಂಕಿತರಿಂದ ವಿಡಿಯೋ ಹಂಚಿಕೆ
ಖಾಸಗಿ ವಿದ್ಯಾರ್ಥಿಗಳಿಗೆ ಆಗಸ್ಟ್ 31ರೊಳಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರ ಒಳಗೆ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್(Hgh Court) ಸೂಚನೆ ನೀಡಿದೆ. ಪರೀಕ್ಷೆಯ ವೇಳೆ ಕೋವಿಡ್ ಮಾರ್ಗಸೂಚಿಗಳ ಪಾಲನೆ ಅಗುವಂತೆ ಎಚ್ಚರ ವಹಿಸಬೇಕೆಂದು ನ್ಯಾಯಾಲಯವು ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ತಿಳಿಸಿದೆ. ಒಟ್ಟು 17,477 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ