Bangalore Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಸಂಚರಿಸುವವರಿಗೆ ಗುಡ್ ನ್ಯೂಸ್ ಇದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಇಂದಿನಿಂದ ಸವಾರರಿಂದ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿತ್ತು. ಆದರೆ, ಇದೀಗ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹವನ್ನು ಮಾರ್ಚ್ 14ರವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಾಧ್ಯಮ ಪ್ರಕಟಣೆ ಪ್ರತಿಯನ್ನು ಹಂಚಿಕೊಂಡಿದ್ದಾರೆ.
🙏🙏🙏 pic.twitter.com/bZHan9j525
— Pratap Simha (@mepratap) February 27, 2023
ಇದನ್ನೂ ಓದಿ- ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೆಗೆ 250 ರೂ. ಟೋಲ್ ನಿಗದಿ ಸಾಧ್ಯತೆ
ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ- KCET 2023: ಕೆಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟಣೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಮಾರ್ಚ್ 15ರ ನಂತರ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಈ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ಕೊಡುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.