ರೈತರಿಗೆ ಸಿಹಿಸುದ್ದಿ; ತುಮಕೂರಿನಲ್ಲಿ ಕೊಬ್ಬರಿ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಚಾಲನೆ
ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಮತ್ತು ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಖರೀದಿಗೆ ಅವಕಾಶವಿದೆ. ಖರೀದಿಗೆ 3 ತಿಂಗಳ ಅವಕಾಶ ನೀಡಲಾಗಿದ್ದು, ಅಗತ್ಯವಿದ್ದರೆ ಖರೀದಿ ಅವಧಿ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.
ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೊನೆಗೂ ಪ್ರತಿಭಟನೆಯ ಫಲ ಸಿಕ್ಕಂತಾಗಿದೆ. ತುಮಕೂರಿನಲ್ಲಿ ಕೊಬ್ಬರಿ ಕೇಂದ್ರಕ್ಕೆ ಚಾಲನೆ ಸಿಗಲಿದೆ. ಇದಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯದಿಂದಲೂ ಕೊಬ್ಬರಿಗೆ ಬೆಂಬಲ ಬೆಲೆ ನೀಡುವ ಭರವಸೆ ದೊರೆತಿದೆ. ಹಾಗಾದರೆ ಏನೆಲ್ಲಾ ಸೌಲಭ್ಯಗಳು ಸಿಗಲಿವೆ. ರೈತರಿಗೆ ಈ ಸುದ್ದಿ ಎಷ್ಟು ಸಿಹಿಯಾಗಿರಲಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.
ತುಮಕೂರಿನಲ್ಲಿ ಇಂದು(ಜನವರಿ 24) ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಆಹಾರ ಸಂಸ್ಕರಣೆ ಉದ್ಯಮಗಳ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಕೊಬ್ಬರಿ ಕೇಂದ್ರಕ್ಕೆ ಚಾಲನೆ ನೀಡಿದರು. ಎಪಿಎಂಸಿಯಲ್ಲಿರುವ ಈ ಕೊಬ್ಬರಿ ಕೇಂದ್ರ ಸೇರಿದಂತೆ ಜಿಲ್ಲೆಯ 21 ಕೇಂದ್ರಗಳಲ್ಲಿ ಕೊಬ್ಬರಿ ಖರೀದಿಸಲಾಗುತ್ತದೆ.
ಇದನ್ನೂ ಓದಿ-ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಜೀವ ಪ್ರತಿಷ್ಟಾನ- ಬೆಂಗಳೂರಿನಲ್ಲಿ ಎಲ್ಲೆಲ್ಲೂ ರಾಮನಾಮ..!!
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ, ಕೇಂದ್ರ ಸರ್ಕಾರ ನಿಗದಿಪಡಿಸಿರುವ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 12 ಸಾವಿರ ರೂ. ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಕೊಬ್ಬರಿ ಖರೀದಿ ಮಾಡಲಾಗುತ್ತದೆ. ಇದರ ಜೊತೆಗೆ ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1,500 ರೂ. ಸೇರಿಸಿ ತಲಾ ಕ್ವಿಂಟಾಲ್ ಕೊಬ್ಬರಿಯನ್ನು 13,500 ರೂ.ಗೆ ಖರೀದಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ತುಮಕೂರು ನಗರ, ತಿಪಟೂರು, ಕೊನೇಹಳ್ಳಿ, ಕರಡಾಳು, ತುರುವೇಕೆರೆ, ಗುಬ್ಬಿ, ಚೇಳೂರು, ಕುಣಿಗಲ್, ಶಿರಾ, ಚಿಕ್ಕನಾಯಕನಹಳ್ಳಿ, ಹುಳಿಯಾರು ಸೇರಿ 21 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಗತ್ಯವಿದ್ದರೆ ವಿಸ್ತರಣೆ
ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಮತ್ತು ಗರಿಷ್ಠ 20 ಕ್ವಿಂಟಾಲ್ ಕೊಬ್ಬರಿ ಖರೀದಿಗೆ ಅವಕಾಶವಿದೆ. ಖರೀದಿಗೆ 3 ತಿಂಗಳ ಅವಕಾಶ ನೀಡಲಾಗಿದ್ದು, ಅಗತ್ಯವಿದ್ದರೆ ಖರೀದಿ ಅವಧಿ ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಸುರೇಶ್ ಗೌಡ ತಿಳಿಸಿದ್ದಾರೆ. ಜನವರಿ 24ಕ್ಕೆ ಕೊಬ್ಬರಿ ಖರೀದಿ ಕೇಂದ್ರವನ್ನು ಸಚಿವೆ ಶೋಭಾ ಕರಂದ್ಲಾಜೆಯವರು ಉದ್ಘಾಟಿಸುತ್ತಿದ್ದಾರಷ್ಟೇ. ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭವಾಗುವುದು ಫೆಬ್ರವರಿ 1ರಿಂದ. ಕೊಬ್ಬರಿ ಬೆಳೆಗಾರರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು ನಿಗದಿತ ದಿನದಲ್ಲಿ ಕೊಬ್ಬರಿ ಮಾರಾಟ ಮಾಡಿದರೆ 1 ವಾರದೊಳಗೆ ರೈತರ ಬ್ಯಾಂಕ್ ಖಾತೆಗೆ ಕೊಬ್ಬರಿ ಹಣ ಜಮಾ ಆಗುತ್ತದೆ. ಬಯೋಮೆಟ್ರಿಕ್ ಪದ್ಧತಿಯಲ್ಲಿ ಕೊಬ್ಬರಿ ಖರೀದಿಗೆ ಕ್ರಮ ತೆಗೆದುಕೊಂಡಿರುವುದರಿಂದ ಮಧ್ಯವರ್ತಿಗಳ ಕಾಟ ಇರುವುದಿಲ್ಲವೆಂದು ಶಾಸಕ ಬಿ.ಸುರೇಶ್ ಗೌಡ ಹೇಳಿದ್ದಾರೆ.
ಇದನ್ನೂ ಓದಿ-Ram Mandir: ರಾಮ್ ಲಲ್ಲಾ ಭಕ್ತರಿಗೊಂದು ಮಹತ್ವದ ಅಪ್ಡೇಟ್! ಮಂಗಳವಾರದಿಂದ ಬದಲಾಗಲಿದೆ ದರುಶನದ ವೇಳೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.