ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ `ಗುಡ್ ನ್ಯೂಸ್`...!
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮ ಸಿಎಂ ಬಿಎಸ್ ವೈ ಚಾಲನೆ
ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ರಾಜ್ಯದ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ 'ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ' ಪಡೆಯಲು ಅನುಕೂಲವಾಗಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ' ಉಚಿತ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ' ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ(B.S. Yediyurappa) ಚಾಲನೆ ನೀಡಿದ್ದಾರೆ.
ಕಾನೂನು ವಿ.ವಿ: ಕೋವಿಡ್ ನಂತರ ಇಂಟರ್‍ಮಿಡಿಯೆಟ್ ಸೆಮಿಸ್ಟರ್ ಪರೀಕ್ಷೆಗಳು
ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್ ಮತ್ತು 10 ಸಾವಿರ ಲಾಪ್ ಟಾಪ್ ಗಳನ್ನು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ವಿತರಿಸಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನೆ ಹಾಕಿಕೊಂಡಿದೆ. "ಜ್ಞಾನತಾಣ"- ಅಂತರ್ಜಾಲ ಶಿಕ್ಷಣ ಕಾರ್ಯಕ್ರಮದ ಮೂಲಕ 5 ರಿಂದ 10 ನೇ ತರಗತಿಯ ಮಕ್ಕಳಿಗೆ ಇಂಗ್ಲಿಷ್, ಗಣಿತ, ವಿಜ್ಞಾನ ಇತ್ಯಾದಿ ವಿಷಯಗಳನ್ನು ಅಧ್ಯಯನ ನಡೆಸಬಹುದು. 450 ಗೌರವ ಶಿಕ್ಷಕರನ್ನು ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಯೋಜಿಸಲಾಗಿದೆ.
ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 2-3 ದಿನದಲ್ಲಿ 'ಸಂಪುಟ ವಿಸ್ತರಣೆ'..!
ಇತ್ತೀಚಿಗೆ ಖಾಸಗಿ ಟಿವಿ ವಾಹಿನಿ ಮತ್ತು ರೋಟರಿ ಕ್ಲಬ್ ಸಹಯೋಗದಲ್ಲಿ "ಜ್ಞಾನದೀವಿಗೆ" ಎಂಬ ಯೋಜನೆಯ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಚಾಲನೆ ನೀಡಿದ್ದರು.
ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು-ಸಿದ್ಧರಾಮಯ್ಯ