ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದೆ.

Last Updated : Mar 20, 2019, 07:28 AM IST
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ title=

ಬೆಂಗಳೂರು: 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ.

ಹೌದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನೀಡಿದ್ದ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ಇದರಿಂದ ಪರೀಕ್ಷೆಗೆ ತೆರಳುವ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

ಪರೀಕ್ಷೆಗೆ ತೆರಳುವ ವೇಳೆ ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ವತಿಯಿಂದ ನೀಡಲಾಗಿರುವ ರಿಯಾಯಿತಿ ಬಸ್ ಪಾಸ್ ಅನ್ನು ತೋರಿಸಿ ಏಪ್ರಿಲ್ 4ರವರೆಗೆ ಉಚಿತವಾಗಿ ಪ್ರಯಾಣಿಸಬಹುದು.

Trending News