2 Eggs per Student : ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಯಲ್ಲಿ ಮಕ್ಕಳ ಪೌಷ್ಠಿಕಾಂಶ ಹೆಚ್ಚಿಸಲು ಮೊಟ್ಟೆ ನೀಡಲಾಗುತ್ತಿದೆ. ಆದರೆ, ಈ ಬಗ್ಗೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ,  ಧಾರ್ಮಿಕ ಮುಖಂಡರು ವಿರೋಧ ವ್ಯಕ್ತಡಿಸಿದ್ದರು. ಮೊಟ್ಟೆ ವಿತರಣೆಯನ್ನು ನಿಲ್ಲಿಸಬೇಕು. ಶಾಲೆಗಳಲ್ಲಿ ನೀಡುವ ಬಿಸಿಯೂಟದಲ್ಲಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು. 


COMMERCIAL BREAK
SCROLL TO CONTINUE READING

ಮೊಟ್ಟೆಯನ್ನು ಬಿಸಿಯೂಟ ಯೋಜನೆಯಿಂದ ಕೈಬಿಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದರು. ಶಾಲೆ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರದ ಬಗ್ಗೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ವಿರೋಧಿಸಿದ್ದರು. ನಮ್ಮ ಆಹಾರ ಪದ್ದತಿಯನ್ನು ಬದಲಿಸಬಾರದು. ಪರಂಪರೆಯಲ್ಲಿ ರೂಢಿಸಿಕೊಂಡು ಬಂದಿರುವಂತಹ ಸಾತ್ವಿಕ ಆಹಾರ ಪದ್ಧತಿಯೇ ಉತ್ತಮ ಎಂದಿದ್ದರು. 


ಈ ಘಟನೆಗಳ ನಂತರ, ನಮಗೆ ಮೊಟ್ಟೆ ಬೇಕೆ ಬೇಕು ಅಂತ ವಿದ್ಯಾರ್ಥಿಗಳೇ ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದರು. ಸದ್ಯ ಕಾಂಗ್ರೆಸ್‌ ಸರ್ಕಾರ ವಿದ್ಯಾರ್ಥಿಗಳ ಬೆಳವಣಿಗೆ ನಿಟ್ಟಿನಲ್ಲಿ ಎರಡು ಮೊಟ್ಟೆ ನೀಡಲು ನಿರ್ಧರಿಸಿದೆ.


ಮಕ್ಕಳ ಆರೋಗ್ಯ..ಬೆಳವಣಿಗೆ ನಿಟ್ಟಿನಲ್ಲಿ ಕಾಂಗ್ರೆಸ್‌ ಉತ್ತಮ ನಡೆಯತ್ತ ಸಾಗಿದೆ. ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ನಡುವೆ ಮತ್ತೊಂದು ಗ್ಯಾರಂಟಿ ನೀಡಲು ಹೊರಟಿದೆ. ಶೀಘ್ರದಲ್ಲೇ ರಾಜ್ಯದ ಯಾವುದಾದರು ಒಂದು ಶಾಲೆಯಲ್ಲಿ  "ಮೊಟ್ಟೆ ಭಾಗ್ಯ" ಯೋಜನೆಗೆ ಚಾಲನೆ ಮಾಡಲಾಗುತ್ತೆ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 


ಒಂದರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ 2 ದಿನ ಮೊಟ್ಟೆಗಳನ್ನುಲಾಗುವುದು. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ನೀಡಲಾಗುತ್ತದೆ. ಇದೇ ವೇಳೆ ಗ್ರಾಮೀಣ ಭಾಗದಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು. 


ಇದನ್ನೂ ಓದಿ-ಕಮಲ ಶಾಸಕರ ಘರ್ ವಾಪ್ಸಿಗೆ ಸಿಎಂ ಸಿದ್ದರಾಮಯ್ಯ ವಿರೋಧ!


ಮೊಟ್ಟೆ ಭಾಗ್ಯದ ಸದುಪಯೋಗ 60 ಲಕ್ಷ ಮಕ್ಕಳು ಪಡೆಯಲಿದ್ದಾರೆ.ಶಿಕ್ಷಣ ಇಲಾಖೆಯು ಬಹುದೊಡ್ಡ ಇಲಾಖೆಯಾಗಿದೆ. ನಮ್ಮ ಶಾಲೆಗಳಿಗೆ 1.20 ಕೋಟಿ ಮಕ್ಕಳು ಬರಲಿದ್ದಾರೆ. ಸರ್ಕಾರಿ ಶಾಲೆಗಳ ರಿಪೇರಿ ಹಾಗೂ ಉನ್ನತೀಕರಣ ಸೇರಿದಂತೆ ಎಲ್ಲಾ ರೀತಿಯ ಅಭಿವೃದ್ಧಿ ಮಾಡಲಾಗುವುದು. ದ್ವಿತೀಯ ಪಿಯುಸಿವರೆಗೆ ಎರಡನೇ ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುವುದು. ಈ ಸಪ್ಲಿಮೆಂಟರಿ ಪರೀಕ್ಷೆಗೆ 95 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದರು.


ಮಕ್ಕಳಲ್ಲಿ ಪೌಷ್ಟಿಕಾಂಶ ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ಯೋಜನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.  ಒಂದರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಅದನ್ನು ಎರಡು ದಿನ ನೀಡುವುದಾಗಿ ಘೋಷಣೆ ಮಾಡಲಾಗಿದೆ. 


ವಿದ್ಯಾರ್ಥಿಗಳೆಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬಹುದು. ರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಇದು ಅನ್ವಯವಾಗಲಿದೆ. ಮುಂದಿನ ದಿನದಲ್ಲಿ 10ನೆ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಆಶಯವನ್ನೂ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ವಿಶೇಷ ಹಣವನ್ನು ಮೀಸಲಿಡಲಾಗಿದೆ. 


ಇದನ್ನೂ ಓದಿ-ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.