ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ರಾಜ್ಯದ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ರಾಜ್ಯದ ಭಕ್ತರಿಗೆ ಕೇಂದ್ರ ಸರ್ಕಾರ  ಭರ್ಜರಿ ಗಿಫ್ಟ್ ನೀಡಿದೆ. ಇದರ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.  

Written by - Ranjitha R K | Last Updated : Jun 28, 2025, 02:00 PM IST
  • ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ್ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​
  • ಚಿಕ್ಕಮಗಳೂರು ಟು ತಿರುಪತಿಗೆ ನೂತನ ರೈಲು ಸಂಚಾರ
  • ಸಚಿವ ವಿ. ಸೋಮಣ್ಣ ಈ ಮಾಹಿತಿ ನೀಡಿದ್ದಾರೆ
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ರಾಜ್ಯದ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​

ಬೆಂಗಳೂರು : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ್ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಚಿಕ್ಕಮಗಳೂರು ಟು ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಈ ಮಾಹಿತಿ ನೀಡಿದ್ದಾರೆ.  

Add Zee News as a Preferred Source

ಇನ್ನು ಮುಂದೆ ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಸಂಚಾರ ಕಲ್ಪಿಸಲಾಗಿದೆ.  ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆಗೆ ಇದು ಸಿಹಿ ಸುದ್ದಿಯಾಗಿರಲಿದೆ. ಈ ರೈಲು ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.ಈ ವಾರದ ರೈಲಿನ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಜನತೆಯಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ಓದಿ : ಬೈಕ್‌ ರ್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದ ರೇಣುಕಾಚಾರ್ಯ, ಆಸ್ಪತ್ರೆಗೆ ದಾಖಲು
 
ರೈಲಿನ ವಿವರ ಹೀಗಿದೆ : 
ತಿರುಪತಿ ಟು ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 9 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು,
ಮರುದಿನ ಅಂದರೆ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.

ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.

ಇದನ್ನೂ ಓದಿ : ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ

ನಿಲ್ದಾಣಗಳು ಹೀಗಿವೆ :
ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣದಲ್ಲಿ ಈ ರೈಲು ನಿಲ್ಲಲಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News