ಬೆಂಗಳೂರು : ರಾಜ್ಯ ಸರ್ಕಾರದಿಂದ ಈಗಾಗಲೇ ವಾಹನ ಮಾಲೀಕರಿಗೆ ಲಾಕ್ ಡೌನ್ ಸಂಕಷ್ಟದಿಂದಾಗಿ ತೆರಿಗೆ ಪಾವತಿಯ ಅವಧಿಯನ್ನು ಜೂನ್.15ರವರೆಗೆ ವಿಸ್ತರಣೆ ಮಾಡಿತ್ತು. ಇಂತಹ ತೆರಿಗೆ ಪಾವತಿಯ ಅವಧಿಯನ್ನು ಮತ್ತೆ ಜೂನ್.30ರವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದ್ದು, ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದೆ.


COMMERCIAL BREAK
SCROLL TO CONTINUE READING

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ(Laxman Savadi), ಕೋವಿಡ್-19 ರ 2ನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ 15-06-2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ 30-06-2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.


ಇದನ್ನೂ ಓದಿ : 'KSRTC' ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್! 


ಸರ್ಕಾರ(Karnataka Govt) ಕೈಗೊಂಡಿರುವ ಈ ಕ್ರಮದ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ : SSLC ಯಾವ ವಿದ್ಯಾರ್ಥಿಯನ್ನು ಫೇಲ್ ಮಾಡಲ್ಲ, ಆದ್ರೆ, ಕನಿಷ್ಠ ಅಂಕ ನಿಗದಿ ಮಾಡಿಲ್ಲ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.