Namma Metro: ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ನಮ್ಮ ಮೆಟ್ರೋ ಕಡೆಯಿಂದ ಗುಡ್ ನ್ಯೂಸ್
Majestic to Whitefield Metro service : ಈ ಮಾರ್ಗದಲ್ಲಿ ಬೆಳಗಿನ ಪೀಕ್ ಆವರ್ ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುವುದು. ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಗೆ ವ್ಯವಸ್ಥೆ ಮಾಡಲಾಗಿದೆ.
Traveling from Majestic to Whitefield by Namma Metro: ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ನಮ್ಮ ಮೆಟ್ರೋ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಈ ಮಾರ್ಗದಲ್ಲಿ ಬೆಳಗಿನ ಪೀಕ್ ಆವರ್ ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುವುದು. ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಗೆ ವ್ಯವಸ್ಥೆ ಮಾಡಲಾಗಿದೆ.
ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರವರೆಗೆ ಹೆಚ್ಚುವರಿ ಮೆಟ್ರೋ ಸೇವೆ ಒದಗಿಸಲಾಗುವುದು. ಈ ಮಾರ್ಗದಲ್ಲಿ 8.45 ರಿಂದ 10.20 ರವರೆಗೆ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳ ಓಡಾಟ ನಡೆಯಲಿದೆ. ಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ನೀಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು ಯುಪಿಎ ಅವಧಿಯಲ್ಲಿ ನಿರಾಕರಿಸಲಾಗಿತ್ತು: ಬಸವರಾಜ ಬೊಮ್ಮಾಯಿ
ಬೈಯಪ್ಪನಹಳ್ಳಿಯಿಂದ ಕೆ.ಆರ್.ಪುರ ಲಿಂಕ್ ಕನೆಕ್ಟ್ ಆದಮೇಲೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳವಾಗಿದೆ. ಹೆಚ್ಚುವರಿ ಮೆಟ್ರೋ ಬಿಡಿ ಅಂತ ಬಿಎಂಆರ್ ಸಿಎಲ್ ಗೆ ಹಲವು ಬಾರಿ ಮನವಿ ಜನರು ಮಾಡಿದ್ದರು. ಹೀಗಾಗಿ ಸೋಮವಾರದಿಂದ ಬೆಳಗಿನ ದಟ್ಟಣೆಯ ಸಮಯದಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಒದಗಿಸಲು ನಿರ್ಧರಿಸಲಾಗಿದೆ.
ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಕಡೆ ಪ್ರಯಾಣಿಸೋರಿಗೆ ಇದು ಅನುಕೂಲವಾಗಲಿದೆ. ಆದ್ರೆ ಶನಿವಾರ, ಭಾನುವಾರ ಮತ್ತು ರಜಾದಿನ ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಈ ಸೇವೆ ಲಭ್ಯವಾಗಲಿದೆ.
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲಿನ ಸೇವೆ 5 ಗಂಟೆಗೆ ಆರಂಭವಾಗಲಿದೆ. ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 5.00 ಗಂಟೆಗೆ ಮೆಟ್ರೋ ಸೇವೆ ಆರಂಭ ಆಗಲಿದೆ.
ಇದನ್ನೂ ಓದಿ: ರಾಷ್ಟ್ರಮಟ್ಟದ ಇಬ್ಬರು ನಾಯಕರಿಗೆ ಸಾವಿನ ಕಂಟಕ, ಓರ್ವ ಧಾರ್ಮಿಕ ಪ್ರಮುಖನ ಸಾವು: ಕೋಡಿಶ್ರೀ ಭವಿಷ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.