Good News: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ತಪ್ಪದೆ ಓದಿ

Egg In Mid-Day Meals: ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಇದೀಗ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.

Written by - Manjunath Hosahalli | Edited by - Nitin Tabib | Last Updated : Jul 18, 2022, 10:07 PM IST
  • ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ಪ್ರಕಟಿಸಿದೆ.
  • ಕೇವಲ ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿದ್ದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ,
  • ಇದೀಗ ಇಡೀ ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
Good News: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ತಪ್ಪದೆ ಓದಿ title=
Egg In Mid-Day Meals

All Schools Children Will Get Egg In Mid-Day Meals - ಬೆಂಗಳೂರು : ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ಪ್ರಕಟಿಸಿದೆ. ಕೇವಲ ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿದ್ದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ, ಇದೀಗ ಇಡೀ ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇದನ್ನೂ ಓದಿ-ಸರ್ಕಾರದ ಹೊಸ ಪ್ಲಾನ್: ಟ್ರಾಫಿಕ್ ಪೊಲೀಸರ ಮಾದರಿಯಲ್ಲಿ ಜೈಲು ಸಿಬ್ಬಂದಿಗೂ ಬಾಡಿವೋರ್ನ್ ಕ್ಯಾಮೆರಾ

ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಇದೀಗ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ-ಮಾರ್ಕೊಪೋಲೋ-ಟಾಟಾ ಮೋಟಾರ್ ಬಿಕ್ಕಟ್ಟು ಬಹುತೇಕ ಇತ್ಯರ್ಥ

ಈ ಯೋಜನೆಯಿಂದ ಸರ್ಕಾರಕ್ಕೆ 350 ಕೋಟಿ ವೆಚ್ಚ
ಇದಕ್ಕೂ ಮೊದಲು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವರ್ಷದಲ್ಲಿ 100 ದಿನಗಳು ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಿಸಲು, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಅರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 100 ದಿನಗಳ ಬದಲು 46 ದಿನಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಇನ್ನು ಈ ಯೋಜನೆಗೆ ಒಟ್ಟು 350ಕೋಟಿ ವೆಚ್ಚ ಆಗಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News