Good News: ಇಂದಿನಿಂದ ರಾಜ್ಯದಾದ್ಯಂತ 'ಪೋಡಿ ದುರಸ್ತಿ ಅಭಿಯಾನ' ಆರಂಭ

ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. 

Written by - Puttaraj K Alur | Last Updated : Sep 2, 2024, 10:16 PM IST
  • ರಾಜ್ಯದಾದ್ಯಂತ ಇಂದಿನಿಂದ (ಸೆಪ್ಟೆಂಬರ್ 2) ಪೋಡಿ ದುರಸ್ತಿ ಅಭಿಯಾನ ಆರಂಭ
  • ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕೃಷ್ಣ ಬೈರೇಗೌಡ
  • ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲಾ ಸಚಿವರ ಒತ್ತಡವಿದೆ
Good News: ಇಂದಿನಿಂದ ರಾಜ್ಯದಾದ್ಯಂತ 'ಪೋಡಿ ದುರಸ್ತಿ ಅಭಿಯಾನ' ಆರಂಭ title=
ಇಂದಿನಿಂದ ಪೋಡಿ ದುರಸ್ತಿ ಅಭಿಯಾನ

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ (ಸೆಪ್ಟೆಂಬರ್ 2) ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ತಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ದಶಕಗಳ ಹಿಂದೆ ಮಂಜೂರಾಗಿದ್ದ ಸರ್ಕಾರಿ ಜಮೀನು ಸಹ, ಪೋಡಿ ದುರಸ್ತಿ ಆಗದೆ ಬಾಕಿ ಉಳಿದಿದೆ. ತೊಂದರೆ ಅನುಭವಿಸುತ್ತಿರುವ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. 

ರೈತರು ಇಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ಅಲ್ಲದೆ ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕೆಂದು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆ್ಯಪ್ ಸಿದ್ಧಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.  

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಗೆ 7 ದಿನ ತಾತ್ಕಾಲಿಕ ರಿಲೀಫ್‌

13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆ್ಯಪ್‌ನಲ್ಲಿ ನಮೂದಿಸಿದ್ದಾರೆ. ಈಗಾಗಲೇ ಶೇ.90ರಷ್ಟು ಜಾಗಗಳಿಗೆ ಖುದ್ದು ಭೇಟಿ ನೀಡಲಾಗಿದೆ. ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು, ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಭೂ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. 

ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ RTCಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ ಅವರಿಗೆ ಮಂಜೂರಾಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ದರೂ ದುರಸ್ತಿಯಾಗಿಲ್ಲ. ಇಂತಹ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಸಿಎಂ ಯಾರು ಅಂತ ತೀರ್ಮಾನ ಮಾಡೋದು ಹೈಕಮಾಂಡ್‌ : ಜಿ. ಪರಮೇಶ್ವರ್‌

ಅಕ್ರಮ -ಸಕ್ರಮದಡಿ ಮಂಜೂರಾಗಿದ್ದರೂ, ದಶಕಗಳಿಂದ ಪೋಡಿ ದುರಸ್ತಿ ಬಾಕಿ ಇದ್ದು, ಲಕ್ಷಾಂತರ ರೈತರು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ಕೆಲವರ ಜಮೀನು ಮಾತ್ರ ಪೋಡಿ ದುರಸ್ತಿಯಾಗಿದೆ. ಇದರಿಂದ ಅನೇಕ ರೈತರು ತೊಂದರೆಗೊಳಗಾಗಿದ್ದಾರೆ. ಸೆಪ್ಟೆಂಬರ್ 2ರಿಂದ ಅಭಿಯಾನ ಮಾದರಿಯಲ್ಲಿ ಒಂದರಿಂದ ಐದು ನಮೂನೆ ಪೋಡಿ ದುರಸ್ತಿ ಕೆಲಸಕ್ಕೆ ಮುಂದಾಗಬೇಕೆಂದು ಸಚಿವರು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News