ಬಿಎಸ್ ವೈ ಸರ್ಕಾರದಿಂದ ಪಡಿತರ ಚೀಟಿದಾರರಿಗೊಂದು 'ಗುಡ್ ನ್ಯೂಸ್'

ಅಪೌಷ್ಟಿಕತೆ ನಿವಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ

Last Updated : Nov 23, 2020, 07:58 PM IST
  • ಅಪೌಷ್ಟಿಕತೆ ನಿವಾರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ
  • ಪಡಿತರ ಫಲಾನುಭವಿಗಳಿಗೆ ಸಾರವರ್ಧಕ ಅಕ್ಕಿ ವಿತರಿಸಲು ಮುಂದಾದ ಸರ್ಕಾರ
  • ಕೇಂದ್ರ ಸರ್ಕಾರದ ಯೋಜನೆ ಇದಾಗಿದ್ದು 174.6 ಕೋಟಿ ರೂ. ಅನುದಾನ
ಬಿಎಸ್ ವೈ ಸರ್ಕಾರದಿಂದ ಪಡಿತರ ಚೀಟಿದಾರರಿಗೊಂದು 'ಗುಡ್ ನ್ಯೂಸ್' title=

ಬೆಂಗಳೂರು: ಪಡಿತರ ಫಲಾನುಭವಿಗಳಿಗೆ ಸಾರವರ್ಧಕ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಪೌಷ್ಟಿಕತೆ ನಿವಾರಣೆಗೆ ಮುಂದಾಗಿರುವ ಸರ್ಕಾರ ಪಡಿತರ ಚೀಟಿದಾರರಿಗೆ ಸಾರವರ್ಧಕ ಹೊಂದಿದ ಅಕ್ಕಿ ವಿತರಿಸಲಿದೆ ಎನ್ನಲಾಗಿದೆ.

ವಿಟಮಿನ್, ಕಬ್ಬಿಣಾಂಶ ಮತ್ತು ಪೌಷ್ಟಿಕಾಂಶಗಳನ್ನು ಒಳಗೊಂಡ ಸಾರವರ್ಧಕ ಅಕ್ಕಿ(Rice)ಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲು ಯೋಜನೆ ರೂಪಿಸಲಾಗಿದ್ದು, ಪ್ರಾಯೋಗಿಕವಾಗಿ ಯಾದಗಿರಿ ಇಲ್ಲವೇ ತುಮಕೂರು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

ರಾಜ್ಯಸಭೆ ಬೈಎಲೆಕ್ಷನ್ ನಲ್ಲಿ ಅವಿರೋಧ ಆಯ್ಕೆಯಾದ ಕೆ.ನಾರಾಯಣ್!​ 

ಕಬ್ಬಿಣಾಂಶ ಮತ್ತು ವಿಟಮಿನ್ ಇತರೆ ಪೌಷ್ಟಿಕಾಂಶ ಒಳಗೊಂಡ ಸಾರವರ್ಧನೆ ಅಕ್ಕಿ ವಿತರಿಸಲು ಯೋಜನೆ ರೂಪಿಸಿದ್ದು ಶೀಘ್ರವೇ ಅಧಿಕಾರಿಗಳೊಂದಿಗೆ ಆಹಾರ ಖಾತೆ ಸಚಿವ ಕೆ. ಗೋಪಾಲಯ್ಯ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಯೋಜನೆ ಇದಾಗಿದ್ದು 174.6 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದ್ದು, 15 ರಾಜ್ಯಗಳ ಒಂದೊಂದು ಜಿಲ್ಲೆಗಳಲ್ಲಿ ಜಾರಿಗೆ ತರಲಾಗುತ್ತಿದೆ. ರಾಜ್ಯದಲ್ಲಿ ಒಂದು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.

'ಡಿಸಿಎಂ ಗೋವಿಂದ ಕಾರಜೋಳ ಅವರು ಸಿಎಂ ಆದ್ರೆ ನಮ್ಮದೇನೂ ಅಭ್ಯಂತರವಿಲ್ಲ'

Trending News