ಬೆಂಗಳೂರು :ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ. ಇನ್ನು ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡಿದ್ದು, 8 ಜನರು  ಮೃತಪಟ್ಟಿದ್ದಾರೆ. ಎಂಟು ಜನರ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನು  8 ಜನರನ್ನು ರಕ್ಷಣೆ ಮಾಡಲಾಗಿದೆ. ಎಂಟು ಜನರ ಪೈಕಿ ಆರು ಮಂದಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ. 


ಇದನ್ನೂ ಓದಿ : ಬೆಂಗಳೂರನ್ನು ಬಿಟ್ಟಬಿಡದೇ ಕಾಡುತ್ತಿರುವ ವರುಣ


ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಹೇಳಿದೆ. ಸಾವನ್ನಪ್ಪಿರುವ 8 ಜನರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 2 ಲಕ್ಷ  ಮತ್ತು ಬಿಬಿಎಂಪಿಯಿಂದ 3 ಲಕ್ಷ  ಹೀಗೆ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರಿಗೂ ನೋಟೀಸು ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. 


ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಸಿಎಂ ಮನವಿ :
ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದು ಎಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ.ಈ ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿಏ ಕಾರಣ ಹೊರತು ಮಳೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಕಾರಣದಿಂದಲ್ಲ. ಅನಧಿಕೃತ ಕಟ್ಟಡ ನಿರ್ಮಾಣವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ : ಮೊದಲ ಬಾರಿ ಚುನಾವಣೆ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.