ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಸರ್ಕಾರದ ಅನುಮತಿ
ಈ ಯೋಜನೆಗಳಿಂದ ಒಟ್ಟು 2595 ಜನರಿಗೆ ಉದ್ಯೋಗ ಅವಕಾಶ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು : ರಾಜ್ಯ ಮಟ್ಟದ ವಿವಿಧ ಕೈಗಾರಿಕೆಗಳಿಗೆ ಅನುಮತಿ ನೀಡುವ ಸಂಬಂಧ ರಾಜ್ಯ ಮಟ್ಟದ ಉನ್ನತಾಧಿಕಾರ ಸಮಿತಿ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಸಲಾಯಿತು. ಈ ಸಭೆಯಲ್ಲಿ ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಸರ್ಕಾರದ ಅನುಮತಿ
ಈ ಸಭೆಯಲ್ಲಿ 3427 ಕೋಟಿ ರೂ. ಬಂಡವಾಳ ಹೂಡಿಕೆಯ ನಾಲ್ಕು ಹೊಸ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಒಟ್ಟು 2595 ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದೆಂದು ಅಂದಾಜಿಸಲಾಗಿದೆ.
* ಮೆ. ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1152 ಕೋಟಿ ರೂ. ವೆಚ್ಚದಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಫೆಸಿಲಿಟಿ ಜೊತೆಯಲ್ಲಿ ಎಲೆಕ್ಟ್ರಾನಿಕ್ಸ್/ ಅವೈನಿಕ್ಸ್ ಉತ್ಪಾದನಾ ಮತ್ತು ಜೋಡಣೆ ಘಟಕವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಿದ್ದು, ಇದರಿಂದ 2300 ಮಂದಿಗೆ ಉದ್ಯೋಗ ದೊರೆಯಲಿದೆ.
* ಮೆ. ಸಿಡಿಸಿ ಡೆವಲೆಪ್‍ಮೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 740 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ತಂತ್ರಜ್ಞಾನ ಅನ್ವೇಷಣಾ ಅಂತಾರಾಷ್ಟ್ರೀಯ ಪಾರ್ಕ್ ಸ್ಥಾಪಿಸಲಾಗುವುದು.
* ಮೆ. ಇಂಡಿಯನ್ ಕೋಸ್ಟ್ ಗಾರ್ಡ್ ಕಂಪನಿ 1010 ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪಿಸಲು ಮುಂದಾಗಿದೆ. ಅಲ್ಲದೆ, ಮೆ. ಯೂನಿವರ್ಸಲ್ ಬಿಲ್ಡರ್ಸ್ 525 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಲ್ಲಿ ವಸತಿ ಯೋಜನೆ ಆರಂಭಿಸಲಿದೆ. ಈ ಎಲ್ಲಾ ಯೋಜನೆಗಳಿಗೆ ಸಮಿತಿಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ ಖರ್ಗೆ, ಎಚ್.ಸಿ. ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.