ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಗ್ರಹವಾಗುವ ಶುಲ್ಕವೆಲ್ಲ ಆಯಾ ಸಂಸ್ಥೆಗಳಿಗೇ ವರ್ಗಾವಣೆ: ಸಚಿವ ಅಶ್ವತ್ಥನಾರಾಯಣ

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಶುಲ್ಕವನ್ನು ಆಯಾ ಕಾಲೇಜು ಅಭಿವೃದ್ಧಿ ಸಮಿತಿಗಳಿಗೇ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Ashwathanarayan) ಹೇಳಿದ್ದಾರೆ.

Written by - Prashobh Devanahalli | Edited by - Zee Kannada News Desk | Last Updated : Feb 28, 2022, 05:18 PM IST
  • ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಗ್ರಹವಾಗುವ ಶುಲ್ಕ ಆಯಾ ಸಂಸ್ಥೆಗಳಿಗೇ ವರ್ಗಾವಣೆ
  • ಇವರಿಂದ ಸಂಗ್ರಹವಾಗುವ ಶುಲ್ಕವನ್ನು ಸರಕಾರ ಇನ್ನು ಮುಂದೆ ಮುಟ್ಟುವುದಿಲ್ಲ
  • ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆ
ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಗ್ರಹವಾಗುವ ಶುಲ್ಕವೆಲ್ಲ ಆಯಾ ಸಂಸ್ಥೆಗಳಿಗೇ ವರ್ಗಾವಣೆ: ಸಚಿವ ಅಶ್ವತ್ಥನಾರಾಯಣ title=
ಅಶ್ವತ್ಥನಾರಾಯಣ

ಗೌರಿಬಿದನೂರು: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಶುಲ್ಕವನ್ನು ಆಯಾ ಕಾಲೇಜು ಅಭಿವೃದ್ಧಿ ಸಮಿತಿಗಳಿಗೇ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Ashwathanarayan) ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆದ್ದಾರಿ ಪಕ್ಕ ಜಲಶಕ್ತಿ ಯೋಜನೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಸೋಮವಾರ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ, ಸರಕಾರಿ ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿ ಆವರಣದಲ್ಲಿ ನಿರ್ಮಿಸಿರುವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯದ ಸರಕಾರಿ ಪದವಿ ಕಾಲೇಜು, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಂದ ಸಂಗ್ರಹವಾಗುವ ಶುಲ್ಕವನ್ನು ಸರಕಾರ ಇನ್ನು ಮುಂದೆ ಮುಟ್ಟುವುದಿಲ್ಲ ಎಂದಿದ್ದಾರೆ.

ಬದಲಿಗೆ, ಆಯಾ ಕಾಲೇಜು ಅಭಿವೃದ್ಧಿ ಸಮಿತಿಗಳ ಖಾತೆಗಳಿಗೇ ನೇರವಾಗಿ ಹೋಗುವಂತೆ ಮಾಡಲಿದ್ದು, ಮೂಲಸೌಕರ್ಯ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸುವ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಅಳವಡಿಸಿಕೊಳ್ಳಲಾಗಿದ್ದು, ಇಡೀ ಶೈಕ್ಷಣಿಕ ವಲಯವು ಡೀಪ್ ಲರ್ನಿಂಗ್ (deep learning) ಕ್ರಮದತ್ತ ಹೊರಳಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೂಡ ಆಧುನಿಕ ತಂತ್ರಜ್ಞಾನ ಕೋರ್ಸುಗಳನ್ನು ಪಠ್ಯದಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಕೌಶಲ್ಯ ಕಲಿಕೆಯಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗದ ಖಾತ್ರಿ ದೊರೆಯಲಿದೆ ಎಂದು ಹೇಳಿದ್ದಾರೆ.

21 ನೇ ಶತಮಾನದಲ್ಲಿ ಡಿಜಿಟಲ್ (Digital) ಕೌಶಲ್ಯಗಳು ಅನಿವಾರ್ಯವಾಗಿವೆ. ಹೀಗಾಗಿಯೇ ಸರಕಾರಿ ಕಾಲೇಜುಗಳಲ್ಲಿ ಐಒಟಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ರೋಬೋಟಿಕ್ಸ್ (Robotics) ಮುಂತಾದವುಗಳನ್ನು ಅಳವಡಿಸಲಾಗಿದೆ. ಪಾಲಿಟೆಕ್ನಿಕ್ ಕಾಲೇಜಿನಲ್ಲೂ ವಿದ್ಯುಚ್ಚಾಲಿತ ವಾಹನಗಳ ಕೌಶಲ್ಯ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಕಲಿಕೆಯಂತಹ ಸಮಕಾಲೀನ ಬೇಡಿಕೆಯ ಕೋರ್ಸುಗಳನ್ನು ಸೇರಿಸಲಾಗಿದೆ. ಇಲ್ಲಿನ ಜಿಟಿಟಿಸಿ ಸಂಸ್ಥೆಯಿಂದ ವರ್ಷಕ್ಕೆ 1,000 ವಿದ್ಯಾರ್ಥಿಗಳು ಕೌಶಲ್ಯಸಹಿತರಾಗಿ ಹೊರಹೊಮ್ಮಲಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ: ಗುಪ್ತವಾಗಿ ಮದುವೆಯಾದರೇ ಸಲ್ಮಾನ್ ಖಾನ್? ಈ ಫೋಟೋ ಹೇಳುವುದಾದರೂ ಏನು ?

ಕಳೆದ ಎರಡೂವರೆ ವರ್ಷಗಳಲ್ಲಿ ಪ್ರಬಲ ಇಚ್ಛಾಶಕ್ತಿಯೊಂದಿಗೆ ಸರಕಾರಿ ಕಾಲೇಜುಗಳನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸಲಾಗಿದೆ. ಇವತ್ತು ಖಾಸಗಿ ವಿ.ವಿ ಗಳು ಕೂಡ ಈ ಮಟ್ಟಕ್ಕಿಲ್ಲ ಎಂದು ಅವರು ಬಣ್ಣಿಸಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News